alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಆಪ್ತನ ವಿರುದ್ಧ ಬಂಡಾಯದ ಬಾವುಟ

ಹಾಸನ: ಹೊಳೆನರಸೀಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಪ್ತನ ಸ್ಪರ್ಧೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ.

ಹೊಳೆನರಸೀಪುರದಲ್ಲಿ ಗೌಡರ ಮಕ್ಕಳು ಗೆದ್ದಿದ್ದು ಸಾಕು, ಕ್ಷೇತ್ರಕ್ಕೆ ಹೋಗಿ ಚುನಾವಣೆಗೆ ಸಿದ್ಧರಾಗುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಗೂರು ಮಂಜೇಗೌಡರಿಗೆ ಸೂಚಿಸಿದ್ದ ಆಡಿಯೋ ವೈರಲ್ ಆಗಿತ್ತು.

ಬಾಗೂರು ಮಂಜೇಗೌಡ ಈಗಾಗಲೇ ಚುನಾವಣೆಗೆ ತಯಾರಿ ನಡೆಸಿದ್ದಾರೆ. ಆದರೆ, ಅವರಿಗಿನ್ನೂ ಸ್ವಯಂ ನಿವೃತ್ತಿ ಸಿಕ್ಕಿಲ್ಲ. ಮುಖ್ಯಮಂತ್ರಿ ಬೆಂಬಲ ಇರುವುದರಿಂದ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವ ಸಾಧ್ಯತೆ ಇದೆ. ಆದರೆ, ಬಾಗೂರು ಮಂಜೇಗೌಡರಿಗೆ ಟಿಕೆಟ್ ಕೊಡಬಾರದೆಂಬ ಒತ್ತಡ ಸ್ವಪಕ್ಷೀಯರಿಂದಲೇ ಕೇಳಿ ಬಂದಿದೆ.

2 ಚುನಾವಣೆಗಳಲ್ಲಿ ಸೋಲು ಕಂಡಿದ್ದ ಅನುಪಮಾ ಅವರು ಆಕಾಂಕ್ಷಿಯಾಗಿದ್ದು, ಕ್ಷೇತ್ರದ ಹೊರಗಿನವರಿಗೆ ಟಿಕೆಟ್ ಕೊಡಬಾರದು. ಸ್ಥಳೀಯರಿಗೆ ಟಿಕೆಟ್ ಕೊಡಬೇಕೆಂದು ಒತ್ತಾಯಿಸಿದ್ದಾರೆ.

ಸರ್ಕಾರಿ ನೌಕರರಾಗಿರುವ ಮಂಜೇಗೌಡರಿಗೆ ನಿವೃತ್ತಿ ಸಿಕ್ಕಿಲ್ಲ. ಅವರು ಟಿಕೆಟ್ ಗೆ ಅರ್ಜಿಯನ್ನೇ ಸಲ್ಲಿಸಿಲ್ಲ. ಅವರಿಗೆ ಹೇಗೆ ಟಿಕೆಟ್ ಕೊಡ್ತಾರೆ ಎಂದು ಅನುಪಮಾ ಪ್ರಶ್ನಿಸಿದ್ದಾರೆ. ಒಂದು ವೇಳೆ ಅವರಿಗೇ ಟಿಕೆಟ್ ಕೊಟ್ಟಲ್ಲಿ, ಕಾರ್ಯಕರ್ತರು, ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...