alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಎರಡು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ

ಹಾಸನ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಆಲೂರು, ಸಕಲೇಶಪುರ ತಾಲೂಕು ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಾಫರ್ ಆದೇಶಿಸಿದ್ದಾರೆ.

ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ, ಸಕಲೇಶಪುರ-ಬೆಳಗೋಡು-ಬೇಲೂರು ಮಾರ್ಗ ಬಂದ್ ಆಗಿದ್ದು, ಮರವನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ.

ಭಾರಿ ಮಳೆಯಾಗುತ್ತಿರುವ ಕಾರಣ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಇನ್ನೂ ಕೆಲ ದಿನಗಳ ಕಾಲ ಇದೇ ರೀತಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...