alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ಶಿವಮೊಗ್ಗ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

ganapa

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಂದೂ ಸಂಘಟನಾ ಮಹಾಮಂಡಳಿ ವತಿಯಿಂದ ಪ್ರತಿಷ್ಠಾಪಿಸಿರುವ, ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಸೆಪ್ಟಂಬರ್ 15 ರಂದು ನಡೆಯಲಿದೆ.

ಜಿಲ್ಲೆಯಲ್ಲಿ ಪ್ರಮುಖ ಮತ್ತು ಅತಿ ಸೂಕ್ಷ್ಮತೆಯಿಂದ ಕೂಡಿರುವ ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಸೆಪ್ಟಂಬರ್ 14 ರ ಮಧ್ಯ ರಾತ್ರಿಯಿಂದ ಸೆಪ್ಟಂಬರ್ 18 ರ ಮಧ್ಯರಾತ್ರಿಯವರೆಗೆ, ನಗರ ಪ್ರದೇಶ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ವಿ.ಪಿ. ಇಕ್ಕೇರಿ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ, ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಅಂಗವಾಗಿ ನಾಳೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿದೆ. ಡ್ರೋಣ್ ಮೂಲಕ ಮೆರವಣಿಗೆ ದೃಶ್ಯಾವಳಿಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗುವುದು. ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಅಭಿನವ್ ಖರೆ ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...