alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಸರ್ಕಾರಿ ರಜೆ ದಿನಗಳಿಗೆ ಬೀಳಲಿದೆ ಕತ್ತರಿ…!

ಸರ್ಕಾರಿ ರಜಾ ದಿನಗಳು ಹೆಚ್ಚುತ್ತಿರುವ ಕಾರಣ ಸಾರ್ವಜನಿಕರ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುತ್ತಿಲ್ಲವೆಂಬ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ರಜೆಗಳ ಸಂಖ್ಯೆ ಕಡಿತಗೊಳಿಸುವ ಕುರಿತು ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿ ರಚಿಸಿದೆ.

2019-20 ರ ಸಾಲಿನಲ್ಲಿ 54 ವಾರದ ರಜೆಗಳು, 12 ಎರಡನೇ ಶನಿವಾರ ಹಾಗೂ 21 ಸಾರ್ವತ್ರಿಕ ರಜಾ ದಿನಗಳು ಬಂದಿದ್ದು, ಜೊತೆಗೆ 19 ಸಾಂದರ್ಭಿಕ ರಜೆಗಳಿವೆ.

ಹೀಗಾಗಿ ರಜಾ ದಿನಗಳನ್ನು ಕಡಿತಗೊಳಿಸಲು ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದ್ದು, ಈಗಲೇ ರಜೆಗಳ ಸಂಖ್ಯೆ ಹೆಚ್ಚಾಗಿರುವ ಕಾರಣ, ನಾಲ್ಕನೇ ಶನಿವಾರವೂ ಸರ್ಕಾರಿ ನೌಕರರಿಗೆ ರಜೆ ನೀಡಬೇಕೆಂಬ ಆರನೇ ವೇತನ ಆಯೋಗದ ಶಿಫಾರಸ್ಸು ಜಾರಿಯಾಗುವುದು ಕಷ್ಟ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...