alex Certify
ಕನ್ನಡ ದುನಿಯಾ       Mobile App
       

Kannada Duniya

ಗೃಹರಕ್ಷಕ ದಳದ ಸಿಬ್ಬಂದಿಗೆ ಗುಡ್ ನ್ಯೂಸ್

ದಾವಣಗೆರೆ: ಗೃಹರಕ್ಷಕ ದಳದ ಸಿಬ್ಬಂದಿಗೆ ಶುಭ ಸುದ್ದಿ ಇಲ್ಲಿದೆ. ಗೃಹರಕ್ಷಕ ದಳದ ಸಿಬ್ಬಂದಿಗೆ ದಿನಭತ್ಯೆ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಗೃಹರಕ್ಷಕ ದಳದ ಹೆಚ್ಚುವರಿ ಕಮಾಂಡೆಂಟ್ ಜನರಲ್ ಡಿ. ರೂಪಾ ಅವರು ಈ ಕುರಿತು ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗೆ 400 ರೂ. ದಿನ ಭತ್ಯೆ ನೀಡುತ್ತಿದ್ದು, ಅದನ್ನು 621 ರೂ. ಗೆ ಹೆಚ್ಚಿಸಲು ಕೋರಲಾಗಿದೆ ಎಂದು ತಿಳಿಸಿದ್ದಾರೆ.

ಅದೇ ರೀತಿ ಇತರೆ ಕಡೆಗಳಲ್ಲಿ 325 ರೂ. ದಿನ ಭತ್ಯೆ ನೀಡಲಾಗುತ್ತಿದ್ದು, ಅದನ್ನು 450 ರೂ. ಗೆ ಹೆಚ್ಚಿಸಲು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕರ್ತವ್ಯ ನಿರತರಾಗಿದ್ದ ವೇಳೆ ಮೃತಪಟ್ಟ ಸಿಬ್ಬಂದಿಗೆ ನೀಡುವ ಪರಿಹಾರದ ಮೊತ್ತವನ್ನು 5 ಲಕ್ಷ ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ. ಕರ್ತವ್ಯ ನಿರತ ಸಿಬ್ಬಂದಿಗೆ ಶೇ. 60 ರಷ್ಟು ಗಾಯಗಳಾದ ಸಂದರ್ಭದಲ್ಲಿ 3 ಲಕ್ಷ ರೂ., ಶೇ. 40 ರಷ್ಟು ಗಾಯಗಳಾದರೆ, 2 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಪೊಲೀಸ್ ನೇಮಕಾತಿಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗೆ ಮೀಸಲಾತಿ ನೀಡಬೇಕೆಂಬ ಪ್ರಸ್ತಾವ ಕೂಡ ಇದೆ. ಇದರೊಂದಿಗೆ ಬಸ್ ಪಾಸ್ ಸೌಲಭ್ಯ ನೀಡಬೇಕೆಂಬ ಬೇಡಿಕೆ ಇದ್ದು, ಸರ್ಕಾರದೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...