alex Certify
ಕನ್ನಡ ದುನಿಯಾ       Mobile App
       

Kannada Duniya

ಹೋಂ ವರ್ಕ್ ಮಾಡದ ಬಾಲಕಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕಿ

teacher beating studentಮನೆ ಪಾಠಕ್ಕೆ ಬರುತ್ತಿದ್ದ ಬಾಲಕಿಯೊಬ್ಬಳು ಹೋಂ ವರ್ಕ್ ಮಾಡಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕಿಯೊಬ್ಬರು ಲೆದರ್ ಬೆಲ್ಟ್ ನಿಂದ ಬಾಸುಂಡೆ ಬರುವಂತೆ ಥಳಿಸಿರುವ ಅಮಾನುಷ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲದ ಸುಭಾಷ್ ನಗರದಲ್ಲಿ ಶಿಕ್ಷಕಿ ಲತಾ ಎಂಬವರು ಮಕ್ಕಳಿಗೆ ಮನೆ ಪಾಠ ಮಾಡುತ್ತಿದ್ದು, ವೆಂಕಟೇಶ್ ಎಂಬವರ ಪುತ್ರಿ, ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಇವರ ಬಳಿ ಮನೆ ಪಾಠಕ್ಕೆ ಹೋಗುತ್ತಿದ್ದಳು.

ತಾನು ಹೇಳಿದ ಹೋಂ ವರ್ಕ್ ಮಾಡಿಕೊಂಡು ಬಂದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಸಿಟ್ಟಿಗೆದ್ದ ಶಿಕ್ಷಕಿ ಲೆದರ್ ಬೆಲ್ಟ್ ನಿಂದ ಬಾಲಕಿಗೆ ಮನಬಂದಂತೆ ಥಳಿಸಿದ್ದಾರೆ. ಇದರಿಂದಾಗಿ ಬಾಲಕಿ ಮೈಮೇಲೆ ಬಾಸುಂಡೆ ಬಂದಿದ್ದು, ಇದೀಗ ಬಾಲಕಿಯ ಪೋಷಕರು ಶಿಕ್ಷಕಿಯ ವಿರುದ್ದ ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನ್ನ ವಿರುದ್ದ ದೂರು ದಾಖಲಾಗುತ್ತಿದ್ದಂತೆಯೇ ಶಿಕ್ಷಕಿ ಲತಾ ನಾಪತ್ತೆಯಾಗಿದ್ದು, ಪೊಲೀಸರು ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...