alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಜ್ಜೇನು ದಾಳಿಗೆ ಪ್ರವಾಸಿಗ ಬಲಿ

ಹೆಜ್ಜೇನುಗಳ ದಾಳಿಯಿಂದ ಪ್ರವಾಸಿಗರೊಬ್ಬರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುತ್ತತ್ತಿಯಲ್ಲಿ ನಡೆದಿದೆ.

ಕಿರುಗಾವಲು ಗ್ರಾಮದ ಪುಟ್ಟಸ್ವಾಮಿ ಎಂಬವರ ಪುತ್ರ ವೆಂಕಟೇಶ್ ಮೃತಪಟ್ಟವರಾಗಿದ್ದು, ಇವರು ಬೆಂಗಳೂರಿನ ಜೆಪಿ ನಗರದಲ್ಲಿ ವಾಸವಾಗಿದ್ದರೆಂದು ತಿಳಿದುಬಂದಿದೆ.

ಸ್ನೇಹಿತರೊಂದಿಗೆ ಮುತ್ತತ್ತಿಗೆ ಪ್ರವಾಸಕ್ಕೆ ಬಂದಿದ್ದ ವೆಂಕಟೇಶ್, ಕಾವೇರಿ ನದಿ ದಡದಲ್ಲಿದ್ದ ವೇಳೆ ಹೆಜ್ಜೇನುಗಳು ದಾಳಿ ನಡೆಸಿವೆ. ಇದರಿಂದಾಗಿ ಪ್ರಜ್ಞೆ ತಪ್ಪಿ ಬಿದ್ದ ಅವರನ್ನು, ಕೂಡಲೇ ಸಾತನೂರು ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.

ಮಗನ ಸಾವಿನ ನೋವಿನಲ್ಲೂ ಪೋಷಕರು ಸಾರ್ಥಕ ಕಾರ್ಯ ಮಾಡಿದ್ದು, ಮೃತ ವೆಂಕಟೇಶ್ ಅವರ ಕಣ್ಣುಗಳನ್ನು ದಾನ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...