alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿಗೆ ಇರಿತ ಪ್ರಕರಣಕ್ಕೆ ಹೊಸ ತಿರುವು….

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿಯಲಾಗಿದ್ದ ಪ್ರಕರಣ ಹೊಸ ತಿರುವು ಪಡೆದಿದೆ. ವಿದ್ಯಾರ್ಥಿನಿಗೆ ಯಾರೂ ಹಲ್ಲೆ ನಡೆಸಿ ಇರಿದಿಲ್ಲ. ಆಕೆಯೇ ಮುಳ್ಳಿನಿಂದ ಗಾಯ ಮಾಡಿಕೊಂಡಿದ್ದಾಳೆ ಎಂಬುದು ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದೆ.

ಡಿಸೆಂಬರ್ 14 ರಂದು ಹೊನ್ನಾವರದ ಮಾಗೋಡಿನಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಸುದ್ದಿ ಹರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದಾಗ ನಿಜ ಸಂಗತಿ ಬಯಲಾಗಿದೆ.

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಪ್ರತಿದಿನ ಗಣೇಶ್ ಎಂಬಾತ ಪ್ರೀತಿಸುವಂತೆ ಪೀಡಿಸುತ್ತಿದ್ದ. ಡಿಸೆಂಬರ್ 14 ರಂದು ಗಣೇಶ್ ಮತ್ತು ಆತನ ಸ್ನೇಹಿತ ಕಿರುಕುಳ ನೀಡಿದ್ದರು. ಅಂದು ಶಾಲೆಯಲ್ಲಿ ಪರೀಕ್ಷೆ ಇದ್ದ ಕಾರಣ ಹುಡುಗರಿಂದ ಮತ್ತು ಶಾಲೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ವಿದ್ಯಾರ್ಥಿನಿ ಮುಳ್ಳಿನಿಂದ ಕೈ ಮೇಲೆ ಗಾಯ ಮಾಡಿಕೊಂಡಿದ್ದಾಳೆ.

ಇದೇ ವಿಚಾರ ಬೇರೆ ಸ್ವರೂಪ ಪಡೆದುಕೊಂಡಿದ್ದು ಆತಂಕಕ್ಕೆ ಕಾರಣವಾಗಿತ್ತು. ಪೊಲೀಸರ ತನಿಖೆಯಲ್ಲಿ ಪ್ರಕರಣ ಬಯಲಾಗಿದೆ. ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಎಸ್.ಪಿ. ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...