alex Certify
ಕನ್ನಡ ದುನಿಯಾ       Mobile App
       

Kannada Duniya

ವೈದ್ಯಕೀಯ ಪರೀಕ್ಷೆಯಲ್ಲಿ ಬಯಲಾಯ್ತು ದೊಡ್ಡಪ್ಪನ ನೀಚಕೃತ್ಯ

ಬೆಂಗಳೂರು: ಬುದ್ಧಿಮಾಂದ್ಯ ಯುವತಿಯ ಮೇಲೆ ದೊಡ್ಡಪ್ಪನೇ ನಿರಂತರವಾಗಿ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ.

ಯುವತಿಯ ಪೋಷಕರು ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಪಕ್ಕದ ಮನೆಯಲ್ಲಿಯೇ ವಾಸವಾಗಿದ್ದ ಇಜಾಜ್ ಪಾಶ ಎಂಬಾತ ಇಂತಹ ಕೃತ್ಯವೆಸಗಿದ್ದಾನೆ.

ಯುವತಿಯ ಮೇಲೆ ಇಜಾಜ್ ಪಾಶ ನಿರಂತರವಾಗಿ ಅತ್ಯಾಚಾರ ಎಸಗಿದ್ದು, ಆಕೆ 8 ತಿಂಗಳ ಗರ್ಭಿಣಿಯಾಗಿದ್ದಾಳೆ. ಹೊಟ್ಟೆ ನೋವಿನ ಕಾರಣದಿಂದ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ಪರೀಕ್ಷಿಸಿದ ಸಂದರ್ಭದಲ್ಲಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ.

ಪೋಷಕರು ಹೊಸಕೋಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...