alex Certify
ಕನ್ನಡ ದುನಿಯಾ       Mobile App
       

Kannada Duniya

ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿರುವಾಗಲೇ ಎದ್ದು ಕುಳಿತ….

ವೈದ್ಯರು ಮೃತಪಟ್ಟಿದ್ದಾನೆಂದು ಘೋಷಿಸಿದ ವ್ಯಕ್ತಿ, ಸಂಬಂಧಿಕರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿರುವಾಗಲೇ ಎದ್ದು ಕುಳಿತ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಸ್ಟೇಷನ್ ಗಾಣಗಾಪುರದ ಈಶ್ವರ ಅಶೋಕ ಈ ವ್ಯಕ್ತಿಯಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಹಲವು ದಿನಗಳಿಂದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅನಾರೋಗ್ಯ ಉಲ್ಬಣಿಸಿದಾಗ ಈಶ್ವರ ಅಶೋಕನನ್ನು ಸೊಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿನ ವೈದ್ಯರು ಮೃತಪಟ್ಟಿದ್ದಾನೆ ಎಂದು ಘೋಷಿಸಿದ್ದಾರೆ.

ಬಳಿಕ ಸಂಬಂಧಿಕರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದು, ಹತ್ತಿರದ ಬಂಧು ಬಾಂಧವರಿಗೆ ಈ ಕುರಿತು ಸುದ್ದಿ ಮುಟ್ಟಿಸಿದ್ದಾರೆ. ಇದೆಲ್ಲ ನಡೆಯುತ್ತಿರುವಾಗಲೇ ಈಶ್ವರ ಅಶೋಕ ಎದ್ದು ಕುಳಿತಿದ್ದು, ಟೀ ಸಹ ಸೇವಿಸಿದ್ದಾರೆ. ಈಗ ಅವರನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...