alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ಪತ್ರೆಯಲ್ಲೇ ಪೂಜಾ ಕಾರ್ಯ ನೆರವೇರಿಸಿದ ಸಿದ್ಧಗಂಗಾ ಶ್ರೀಗಳು

swamiji

ಬೆಂಗಳೂರು: ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಬಿ.ಜಿ.ಎಸ್.ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ, ಬೆಳಿಗ್ಗೆ ಎಂದಿನಂತೆಯೇ ಎದ್ದು ಪೂಜೆ ನೆರವೇರಿಸಿದ್ದಾರೆ.

ವಾತಾವರಣದಿಂದಾಗಿ ಶ್ರೀಗಳು ಜ್ವರದಿಂದ ಬಳಲಿದ್ದು, ಆಸ್ಪತ್ರೆಯ ವೈದ್ಯರು ಅವರಿಗೆ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಿದ್ದಾರೆ. ಇಂದು ಕೂಡ ವಿವಿಧ ಪರೀಕ್ಷೆಗಳನ್ನು ಮಾಡಲಿದ್ದು, ಆ ನಂತರ ಸ್ವಾಮೀಜಿ ಅವರನ್ನು ಆಸ್ಪತ್ರೆಯಿಂದ ಕಳುಹಿಸಿಕೊಡಲಾಗುವುದು ಎಂದು ಹೇಳಲಾಗಿದೆ. ಸ್ವಾಮೀಜಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ ಎಂಬ ಸುದ್ದಿಯಿಂದ ಭಕ್ತರು ಆತಂಕಗೊಂಡಿದ್ದು, ಆಸ್ಪತ್ರೆ ಬಳಿ ಅವರ ಭೇಟಿಗೆ ಬಂದಿದ್ದರಾದರೂ, ಯಾರಿಗೂ ಭೇಟಿಗೂ ಅವಕಾಶ ಕೊಡಲಿಲ್ಲ.

ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಂಸದ ಬಿ.ಎಸ್.ಯಡಿಯೂರಪ್ಪ ಮೊದಲಾದವರು ಆಸ್ಪತ್ರೆಗೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಸ್ವಾಮೀಜಿ ಆರೋಗ್ಯವಾಗಿದ್ದು, ಚೇತರಿಸಿಕೊಂಡಿದ್ದಾರೆ. ಅವರು ಎಂದಿನಂತೆಯೇ ಪೂಜೆ ನೆರವೇರಿಸಿದ್ದು, ಸಂಜೆ ವೇಳೆಗೆ ಮಠಕ್ಕೆ ವಾಪಸಾಗಲಿದ್ದಾರೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...