alex Certify
ಕನ್ನಡ ದುನಿಯಾ       Mobile App
       

Kannada Duniya

ಕುಡಿದ ಅಮಲಿನಲ್ಲಿ ಎಎಸ್ಐ ಮೇಲೆ ಹಲ್ಲೆಗೆ ಯತ್ನಿಸಿದ ಪೇದೆ

ಕುಡಿದ ಅಮಲಿನಲ್ಲಿದ್ದ ಪೊಲೀಸ್ ಪೇದೆಯೊಬ್ಬ ತನ್ನ ಸ್ನೇಹಿತನೊಂದಿಗೆ ಸೇರಿ ಕರ್ತವ್ಯನಿರತ ಎಎಸ್ಐ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ.

ಮಂಗಳವಾರ ತಡ ರಾತ್ರಿ ಈ ಘಟನೆ ನಡೆದಿದ್ದು, ಹುಳಿಮಾವು ಪೊಲೀಸ್ ಠಾಣೆಯ ಪೇದೆ ಚಂದ್ರು ಎಂಬಾತ ತನ್ನ ಸ್ನೇಹಿತನೊಂದಿಗೆ ಮದ್ಯಪಾನ ಮಾಡಿಕೊಂಡು ಬನ್ನೇರುಘಟ್ಟ ರಸ್ತೆಯ ಎಂಪೈರ್ ಹೋಟೆಲ್ ಗೆ ಊಟಕ್ಕೆ ಹೋಗಿದ್ದಾನೆ.

ಊಟವಾದ ಬಳಿಕ ಬಾಗಿಲು ಮುಚ್ಚುವಂತೆ ಹೋಟೆಲ್ ಸಿಬ್ಬಂದಿಗೆ ಚಂದ್ರು ಹೇಳಿದ್ದಾನೆ. ಆಗ ಅವರು ತಡ ರಾತ್ರಿ 1 ಗಂಟೆವರೆಗೆ ಹೋಟೆಲ್ ತೆರೆಯಲು ಅನುಮತಿ ಇದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಿಬ್ಬಂದಿ ಹಾಗೂ ಪೇದೆ ನಡುವೆ ಮಾತಿನ ಚಕಮಕಿ ನಡೆದಿದೆ.

ಕೊನೆಗೆ ಹೋಟೆಲ್ ಸಿಬ್ಬಂದಿ ಮೈಕೋ ಲೇಔಟ್ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಸ್ಥಳಕ್ಕೆ ಬಂದ ಸಹಾಯಕ ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಅವರ ಮೇಲೆ ಪೇದೆ ಚಂದ್ರು ಹಲ್ಲೆಗೆ ಯತ್ನಿಸಿದನೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...