alex Certify
ಕನ್ನಡ ದುನಿಯಾ       Mobile App
       

Kannada Duniya

‘ಮೌಲ್ವಿ ತಲೆ ಕಡಿದವರಿಗೆ 10 ಲಕ್ಷ ರೂ.’

ಹುಬ್ಬಳ್ಳಿ: ಹುಬ್ಬಳ್ಳಿಯ ಗಣೇಶಪೇಟೆಯೇ ನನಗೆ ಪಾಕಿಸ್ತಾನದಂತೆ ಕಾಣುತ್ತದೆ ಎಂದು ಮೌಲ್ವಿಯೊಬ್ಬರು ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಹುಬ್ಬಳ್ಳಿ ಗಣೇಶಪೇಟೆಯ ದೊಡ್ಡ ಮಸೀದಿಯ ಮೌಲ್ವಿ ಅಬ್ದುಲ್ ಹಮೀದ್ ಖೈರಾತಿ, ಪಾಕಿಸ್ತಾನವನ್ನು ನೋಡಲು ಪಾಕಿಸ್ತಾನಕ್ಕೇ ಹೋಗಬೇಕಿಲ್ಲ. ಹುಬ್ಬಳ್ಳಿಯ ಗಣೇಶಪೇಟೆಯೇ ಪಾಕಿಸ್ತಾನದಂತೆ ಇದೆ ಎಂದು ಹೇಳಿದ್ದು, ಈ ವಿಡಿಯೋ ವೈರಲ್ ಆಗಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮೌಲ್ವಿ ಹೇಳಿಕೆ ನೀಡಿ 2 ದಿನಗಳಾದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಬಿ.ಜೆ.ಪಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಗಲಕೋಟೆಯ ಬಸವರಾಜ ಯಂಕಂಚಿ, ಮೌಲ್ವಿಯ ತಲೆ ಕಡಿದು ತಂದವರಿಗೆ 10 ಲಕ್ಷ ರೂ. ಕೊಡುವುದಾಗಿ ಘೋಷಿಸಿದ್ದಾರೆ.

ಮೌಲ್ವಿಗೆ ಪಾಕಿಸ್ತಾನದ ಮೇಲೆ ಪ್ರೀತಿ ಇದ್ದರೆ, ಅಲ್ಲಿಗೇ ಹೋಗಲಿ. ಅವರು ಇಲ್ಲಿರುವುದು ಬೇಡ. ರಾಷ್ಟ್ರೀಯತೆಗೆ ಧಕ್ಕೆ ತರುವ ಹೇಳಿಕೆ ನೀಡಿರುವ ಅವರ ತಲೆ ತಂದವರಿಗೆ 10 ಲಕ್ಷ ರೂ. ಕೊಡುತ್ತೇನೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...