alex Certify
ಕನ್ನಡ ದುನಿಯಾ       Mobile App
       

Kannada Duniya

ಲಿಂಗಾಯತ ಸಮಾವೇಶದಲ್ಲಿ ವಿವಾದಿತ ಹೇಳಿಕೆ ನೀಡಿದ ಸ್ವಾಮೀಜಿ

ಹುಬ್ಬಳ್ಳಿ: ಇಲ್ಲಿನ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಲಿಂಗಾಯತ ಪ್ರತ್ಯೇಕ ಧರ್ಮ ಸಮಾವೇಶದಲ್ಲಿ ಸ್ವಾಮೀಜಿಯೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ.

ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ ವೀರಶೈವರ ಕುರಿತಾಗಿ ವಿವಾದದ ಹೇಳಿಕೆ ನೀಡಿದ್ದಾರೆ.

ಲಿಂಗಾಯತರು ಒಬ್ಬ ತಂದೆಗೆ ಹುಟ್ಟಿದವರು. ವೀರಶೈವರು ಐವರು ತಂದೆಗೆ ಹುಟ್ಟಿದವರು ಎಂದು ಟೀಕಿಸಿದ್ದಾರೆ. ಲಿಂಗಾಯತ ಧರ್ಮದ ವಿಚಾರವಾಗಿ ನಡೆಸುತ್ತಿರುವ ಹೋರಾಟ ಯಾರ ವಿರುದ್ಧವೂ ಅಲ್ಲ. ನಾವು ಪ್ರತ್ಯೇಕ ಧರ್ಮದ ಮಾನ್ಯತೆಗಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯ ಸಮಾವೇಶಕ್ಕೆ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಮಂದಿ ಆಗಮಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...