alex Certify
ಕನ್ನಡ ದುನಿಯಾ       Mobile App
       

Kannada Duniya

ರದ್ದಾಯ್ತು ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಗಳ ಲೈಸೆನ್ಸ್

hubali-prost

ಹುಬ್ಬಳ್ಳಿ: ವೇಶ್ಯಾವಾಟಿಕೆ ನಿಯಂತ್ರಣಕ್ಕೆ ಎಷ್ಟೆಲ್ಲಾ ಕ್ರಮ ಕೈಗೊಂಡರೂ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಪೊಲೀಸರು ಮತ್ತೊಂದು ಚಾಟಿ ಬೀಸಿದ್ದಾರೆ.

ವೇಶ್ಯಾವಾಟಿಕೆ ಅಡ್ಡೆಗಳಾಗಿದ್ದ ಹುಬ್ಬಳ್ಳಿಯ 11 ಲಾಡ್ಜ್ ಮತ್ತು ಹೋಟೆಲ್ ಗಳ ಲೈಸೆನ್ಸ್ ರದ್ದು ಮಾಡಲಾಗಿದೆ. ಸಾರ್ವಜನಿಕರಿಂದ ನಗರದ ಕೆಲವು ಲಾಡ್ಜ್ ಗಳಲ್ಲಿ ನಿರಂತರವಾಗಿ ವೇಶ್ಯಾವಾಟಿಕೆ ನಡೆಯುತ್ತಿರುವ ಮಾಹಿತಿ ಬಂದಿತ್ತು. ಪೊಲೀಸರು ಕೂಡ ಈ ಬಗ್ಗೆ ಪರಿಶೀಲನೆ ನಡೆಸಿ ನಿರಂತರವಾಗಿ ಕಾರ್ಯಾಚರಣೆ ನಡೆಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬಳಿಕ ವೇಶ್ಯಾವಾಟಿಕೆ ನಡೆಸುತ್ತಿದ್ದ 11 ಲಾಡ್ಜ್ ಮತ್ತು ಹೋಟೆಲ್ ಗಳ ಲೈಸೆನ್ಸ್ ಅನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆ ಸಹಯೋಗದಲ್ಲಿ ರದ್ದು ಮಾಡಿ, ಕ್ರಿಮಿನಲ್ ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...