alex Certify
ಕನ್ನಡ ದುನಿಯಾ       Mobile App
       

Kannada Duniya

‘ಇನ್ನೂ ಕಾಲ ಮಿಂಚಿಲ್ಲ, ಲಿಂಗಾಯತ ಧರ್ಮ ಶಿಫಾರಸು ವಾಪಸ್ ಪಡೆಯಿರಿ’

ಹುಬ್ಬಳ್ಳಿ: ಲಿಂಗಾಯತ ಮತ್ತು ವೀರಶೈವ ಲಿಂಗಾಯತರಿಗೆ(ಬಸವತತ್ವ ಅನುಸರಿಸುವ) ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡಲು ರಾಜ್ಯ ಸಂಪುಟ ಸಭೆ ತೀರ್ಮಾನ ಕೈಗೊಂಡಿದ್ದು, ಈ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲಿದೆ.

ಇದಕ್ಕೆ ಬಾಳೆಹೊಸೂರಿನ ದಿಂಗಾಲೇಶ್ವರ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನೂ ಕಾಲ ಮಿಂಚಿಲ್ಲ, ಕೂಡಲೇ ಮುಖ್ಯಮಂತ್ರಿಯವರು ತಮ್ಮ ತೀರ್ಮಾನವನ್ನು ಹಿಂಪಡೆಯಬೇಕು. ಸಂಪುಟದಲ್ಲಿ ಕೈಗೊಂಡ ನಿರ್ಧಾರವನ್ನು ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಯವರು ಸ್ಪಂದಿಸದಿದ್ದರೆ, ನಾಳೆ ಸಿ.ಎಂ. ಭೇಟಿಯ ವೇಳೆ ಗದಗದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ. ನಮ್ಮ ಸಮುದಾಯದ ಕುರಿತಾಗಿ ಅವರು ನಿರ್ಧಾರ ಕೈಗೊಳ್ಳಬಾರದಿತ್ತು. ಒಂದಿಬ್ಬರು ಸಚಿವರ ಮಾತಿಗೆ ಮಣಿದು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನುಕೂಲವಾಗುವಂತ ತೀರ್ಮಾನ ಕೈಗೊಂಡಿದ್ದಾರೆ. ಈ ತೀರ್ಮಾನದಿಂದ ನಮ್ಮ ಸಮಾಜಕ್ಕೆ ಆಘಾತವಾಗಿದೆ ಎಂದು ತಿಳಿಸಿದ್ದಾರೆ.

ಸಮಾಜದ ಸ್ವಾಮೀಜಿಗಳೆಲ್ಲಾ ಭೇಟಿ ಮಾಡಿದ ಸಂದರ್ಭದಲ್ಲಿ ಯಾವುದೇ ಶಿಫಾರಸು ಮಾಡುವುದಿಲ್ಲ ಎಂದು ಭರವಸೆ ನೀಡಿದ್ದ ಸಿ.ಎಂ., ಅದರಂತೆ ನಡೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...