alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡಿ ಎಂದ ಯೋಗಿ

ಹುಬ್ಬಳ್ಳಿ: ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಆಯೋಜಿಸಿರುವ ಬಿ.ಜೆ.ಪಿ. ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿ ಮಾಡಬೇಕೆಂದು ಹೇಳಿದ್ದಾರೆ.

ದೇಶದಲ್ಲಿಯೇ ಕಾಂಗ್ರೆಸ್ ಮುಕ್ತವಾಗ್ತಿದೆ. ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮುಕ್ತವನ್ನಾಗಿ ಮಾಡಬೇಕಿದೆ. ಕಾಂಗ್ರೆಸ್ ಟಿಪ್ಪುವನ್ನು ಪೂಜಿಸುತ್ತಿದೆ. ಹನುಮಾನ್ ಯಾತ್ರೆಗೆ ತಡೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್, ಧರ್ಮ –ಜಾತಿ ಆಧಾರಿತವಾಗಿ ಸಮಾಜವನ್ನು ಒಡೆಯುತ್ತಿದೆ. ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ, ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಂಡಿಲ್ಲ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಟೀಕಿಸಿದ್ದಾರೆ.

55 ವರ್ಷದ ಆಡಳಿತ ಮಾಡಿದ ಕಾಂಗ್ರೆಸ್ ಸ್ಮಾರ್ಟ್ ಸಿಟಿ ರೂಪಿಸಿಲ್ಲ. ಕಾಂಗ್ರೆಸ್ ಗೆ ಅಭಿವೃದ್ಧಿ ಬೇಕಿಲ್ಲ. ಕಾಂಗ್ರೆಸ್ ನಾಯಕರದು ವಿಭಜನೆಯ ನೀತಿಯಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪಾಠ ಕಲಿಸಬೇಕಿದೆ. ಗುಜರಾತ್ ಜನ ಅಭಿವೃದ್ಧಿಯನ್ನು ಬೆಂಬಲಿಸಿ ಬಿ.ಜೆ.ಪಿ.ಯನ್ನು ಅಧಿಕಾರಕ್ಕೆ ತಂದಿದ್ದಾರೆ. ನೀವೂ ಬಿ.ಜೆ.ಪಿಯನ್ನು ಅಧಿಕಾರಕ್ಕೆ ತನ್ನಿ ಎಂದು ಕರೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...