alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾನರ್ ಕಟ್ಟುವಾಗಲೇ ಬಂದೆರಗಿದ ಸಾವು

ಹುಬ್ಬಳ್ಳಿ: ದೀಪಾವಳಿ ಶುಭಾಶಯ ಕೋರುವ ಫ್ಲೆಕ್ಸ್ ಕಟ್ಟುವಾಗ, ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಬಿ.ಜೆ.ಪಿ. ಮುಖಂಡ ಲಕ್ಷ್ಮಣ ಕೊರಪಾಟಿ ಅವರ ಪುತ್ರ ರವಿ ಕೊರಪಾಟಿ(24) ಮೃತಪಟ್ಟವರು. ಜನತಾ ಕ್ವಾಟ್ರಸ್ ಬಳಿ ದೀಪಾವಳಿ ಹಬ್ಬದ ಶುಭಾಶಯ ಕೋರುವ ಫ್ಲೆಕ್ಸ್ ಕಟ್ಟುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೇಶವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...