alex Certify
ಕನ್ನಡ ದುನಿಯಾ       Mobile App
       

Kannada Duniya

ಗಂಡ-ಹೆಂಡತಿ ಜಗಳ: ಕೊಲೆಯಲ್ಲಿ ಅಂತ್ಯ

ಕಲಬುರಗಿ: ಮಾತಿಗೆ ಮಾತು ಬೆಳೆದು ಜಗಳದ ಮಧ್ಯೆ ತಾಳ್ಮೆ ಕಳೆದುಕೊಂಡ ಪತಿ ಮಹಾಶಯನೊಬ್ಬ ಪತ್ನಿಯನ್ನೇ ಹತ್ಯೆಮಾಡಿರುವ ಘಟನೆ ಕಲಬುರಗಿಯ ಹೀರಾಪುರ ಗ್ರಾಮದಲ್ಲಿ ನಡೆದಿದೆ.

ಪತ್ನಿ-ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದ ಮಧ್ಯೆ ತಾಳ್ಮೆ ಕಳೆದುಕೊಂಡ ಪತಿಮಹಾಶಯ ಸಂತೋಷ್ ಪತ್ನಿಯ ತಲೆಯ ಮೇಲೆ ಕಬ್ಬಿಣದ ಹಾರೆಯಿಂದ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಪತ್ನಿ ಸಾವನ್ನಪ್ಪುತ್ತಿದ್ದಂತೆ ಕಂಗಾಲಾದ ಪತಿ ಪರಾರಿಯಾಗಿದ್ದಾನೆ. 35 ವರ್ಷದ ಸವಿತಾ ಮೃತ ಮಹಿಳೆ.

ಘಟನೆ ಸಂಬಂಧ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...