alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸ್ಥಾನಕ್ಕೆ ಹೆಚ್.ವೈ. ಮೇಟಿ ರಾಜೀನಾಮೆ

meti-maiಸರ್ಕಾರಿ ಕಛೇರಿಯಲ್ಲಿಯೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾರೆಂಬ ಆರೋಪಕ್ಕೆ ಗುರಿಯಾಗಿದ್ದ ಅಬಕಾರಿ ಸಚಿವ ಹೆಚ್.ವೈ. ಮೇಟಿ, ಮಾಧ್ಯಮಗಳಲ್ಲಿ ಈ ಸಿಡಿ ಬಹಿರಂಗವಾಗುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

ಬಾಗಲಕೋಟೆ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಮೇಟಿ ತಮ್ಮ ವಿರುದ್ದ ರಾಸಲೀಲೆ ಆರೋಪ ಕೇಳಿ ಬಂದ ಸಂದರ್ಭದಲ್ಲಿ ಅಂತಹ ಯಾವುದೇ ಸಿಡಿ ಇಲ್ಲ. ತಾವು ಯಾವುದೇ ತಪ್ಪು ಮಾಡಿಲ್ಲವೆಂದು ಹೇಳಿದ್ದರು. ಆದರೆ ಘಟನೆಯಿಂದ ಸರ್ಕಾರಕ್ಕೆ ಮುಜುಗರದ ಪರಿಸ್ಥಿತಿ ಉಂಟಾದ ಹಿನ್ನಲೆಯಲ್ಲಿ ಸಿಡಿಮಿಡಿಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಡಿ ಬಹಿರಂಗವಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ತಾಕೀತು ಮಾಡಿದ್ದರು.

ರಾಸಲೀಲೆಯ ಸಿಡಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗೃಹ ಕಛೇರಿಗೆ ಭೇಟಿ ನೀಡಿದ ಹೆಚ್.ವೈ. ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷ, ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನೂ ಮೇಟಿ ಮಂಗಳವಾರದಂದು ಭೇಟಿ ಮಾಡಿದ್ದ ವೇಳೆ ಅವರೂ ಸಹ ಸಿಡಿ ಬಹಿರಂಗವಾದರೆ ನೈತಿಕತೆ ಆಧಾರದ ಮೇಲೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿದ್ದರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...