alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಮ್ಮೆ ಸಿಎಂ ಆಗಬೇಕೆಂದು ಸಿದ್ದರಾಮಯ್ಯ ಅಪೇಕ್ಷಿಸುವುದರಲ್ಲಿ ತಪ್ಪಿಲ್ಲ ಅಂದ್ರು ಕುಮಾರಸ್ವಾಮಿ

ನವದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂದರೆ ತಪ್ಪೇನು ಎಂದು ಪ್ರಶ್ನಿಸಿರುವ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೆಲ ಹಿರಿಯ ನಾಯಕರು ತಾವೂ ಸಿಎಂ ಆಗಬೇಕೆಂದು ಬಯಸುತ್ತಿದ್ದಾರೆ. ಹೀಗಿರುವಾಗ ಸಿದ್ದರಾಮಯ್ಯನವವರು ಹಿರಿಯ ನಾಯಕರು, ಅನುಭವಸ್ತರು ಹಾಗಾಗಿ ಮತ್ತೊಮ್ಮೆ ತಾವು ಸಿಎಂ ಆಗಬೇಕು ಎಂದು ಅಪೇಕ್ಷಿಸುವುದರಲ್ಲಿ ತಪ್ಪೇನಿಲ್ಲ ಎಂದರು.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದರು. ಈ ವೇಳೆ ಸರ್ಕಾರ ನಡೆಸಲು ಅವಕಾಶ ನೀಡಿದ್ದಕ್ಕೆ ಹಾಗೂ ಮೈತ್ರಿ ಸರ್ಕಾರಕ್ಕೆ ಸಹಕಾರ ನೀಡಿದ್ದಕ್ಕೆ ರಾಹುಲ್ ಗಾಂಧಿಯವರಿಗೆ ಕೃತಜ್ಞತೆ ಸಲ್ಲಿಸಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ನೂರು ದಿನ ಪೂರೈಸಿದೆ. ನಾಡಿನ ಜನತೆಗೆ ಕೃತಜ್ಞತೆಗಳು. ಹಲವಾರು ನಿರೀಕ್ಷೆಗಳನ್ನು ಈಡೇರಿಸುವ ಕಡೆ ಸರ್ಕಾರ ದಾಪುಗಾಲು ಇಡುತ್ತಿದೆ. ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ರೈತ ಸಮುದಾಯ ಬಯಸಿದಂತೆ ಸಾಲ ಮನ್ನಾ ಮಾಡಿದ್ದೇವೆ. ತೆರಿಗೆ ಸಂಗ್ರಹದಲ್ಲಿಯೂ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.

ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಈ ಸರ್ಕಾರದಲ್ಲಿ ಉಭಯ ಪಕ್ಷದ ನಾಯಕರು ಒಂದು ಟೀಂ ಆಗಿ ಕೆಲಸ ಮಾಡುತ್ತಿದ್ದೇವೆ. ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ಮುನ್ನಡೆಯಲು ಸಿದ್ದರಾಮಯ್ಯನವರ ಸಹಕಾರ ಅಗತ್ಯ. ಅದಕ್ಕೆ ಸಂಪೂರ್ಣ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...