alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಲ್ಲಿ ಟೆಕ್ಕಿಯ ಬರ್ಬರ ಹತ್ಯೆ

ಆಕ್ಸೆಂಚರ್ ಕಂಪನಿಯಲ್ಲಿ ಕೆಲಸ ಮಾಡ್ತಾ ಇದ್ದ 28 ವರ್ಷದ ಟೆಕ್ಕಿ ಬೆಂಗಳೂರಲ್ಲಿ ಹತ್ಯೆಗೀಡಾಗಿದ್ದಾನೆ. ಓಡಿಶಾ ಮೂಲದ ಯುವಕ, 28 ವರ್ಷದ ಪ್ರಣೊಯ್ ಮಿಶ್ರಾನನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ.

ಪ್ರಣೊಯ್ ಬೆಳಗ್ಗೆ ತನ್ನ ಗೆಳತಿಯನ್ನು ಭೇಟಿ ಮಾಡಲು ಹೊರಟಿದ್ದ. ಮನೆಯಿಂದ ಒಂದು ಕಿಮೀ ದೂರದಲ್ಲಿ ಈತನ ಮೇಲೆ ದಾಳಿ ನಡೆದಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಪ್ರಣೊಯ್ ಮೃತಪಟ್ಟಿದ್ದಾನೆ. ಭಾನುವಾರ ರಾತ್ರಿ ಪ್ರಣೊಯ್ ಸ್ನೇಹಿತರ ಜೊತೆಗೆ ಪಾರ್ಟಿ ಮಾಡಿದ್ದ. ಮರುದಿನ ಬೆಳಗ್ಗೆ ಆತನ ಹತ್ಯೆಯಾಗಿದೆ. ಆದ್ರೆ ಅವನ ಬಳಿಯಿದ್ದ ಹಣ, ಮೊಬೈಲ್ ಮತ್ತು ಇತರ ವಸ್ತುಗಳನ್ನು ಹಂತಕರು ಕೊಂಡೊಯ್ದಿಲ್ಲ.

ಹಲವು ಬಾರಿ ಚಾಕುವಿನಿಂದ ಟೆಕ್ಕಿಗೆ ಇರಿಯಲಾಗಿದೆ ಅಂತಾ ಪೊಲೀಸರು ತಿಳಿಸಿದ್ದಾರೆ. ಆತನ ಸ್ನೇಹಿತರು ಮತ್ತು ಸಹೋದ್ಯೋಗಿಗಳಿಂದ ಸಹ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಕೊಲೆಯ ಹಿಂದಿನ ಉದ್ದೇಶ ಇದುವರೆಗೂ ಸ್ಪಷ್ಟವಾಗಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...