alex Certify
ಕನ್ನಡ ದುನಿಯಾ       Mobile App
       

Kannada Duniya

ಎದೆ ನಡುಗಿಸುತ್ತೆ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ಈ ದೃಶ್ಯ

ಬೆಂಗಳೂರು: ಬೈಕ್ ನಲ್ಲಿ ಹೋಗುತ್ತಿರುವ ಯುವಕನ ಮೇಲೆ‌ ರಸ್ತೆ ಬದಿಯಲ್ಲಿ‌ ನಿರ್ಮಾಣಗೊಳ್ಳುತ್ತಿದ್ದ ಕಟ್ಟಡದಿಂದ ಕಬ್ಬಿಣ ಫ್ರೇಮ್ ಬಿದ್ದರೂ ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಎಸ್.ಪಿ. ರೋಡ್ ನಲ್ಲಿ ಘಟನೆ ನಡೆದಿದ್ದು, ಭಾರಿ ಗಾತ್ರದ ಕಬ್ಬಿಣದ ಫ್ರೇಮ್ ಅಚಾನಕ್ ಆಗಿ, ಯುವಕ‌ನ ಮೇಲೆ ಬಿದ್ದಿದೆ. ಬೈಕ್ ನಿಂದ ಕೆಳ ಬಿದ್ದು ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಸಿಕ್ಕಿದೆ.

ಆಗಸ್ಟ್ 31 ರಂದು ನಡೆದಿರುವ ಈ ಘಟನೆಯಲ್ಲಿ ಅದೃಷ್ಟವಶಾತ್ ಯುವಕ ಚಂದನ್ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರು ಕಟ್ಟಡದ ಮಾಲೀಕ ಹಾಗೂ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...