alex Certify
ಕನ್ನಡ ದುನಿಯಾ       Mobile App
       

Kannada Duniya

ತವರಲ್ಲಿ ಸೋತ ‘ಯೋಗಿ’ ರಾಜ್ಯದಲ್ಲಿ ‘ಅಲೆ’ ಎಬ್ಬಿಸ್ತಾರಾ…?

ಉತ್ತರ ಪ್ರದೇಶದ ಗೋರಖ್ ಪುರ ಮತ್ತು ಫೂಲ್ ಪುರ ಲೋಕಸಭೆ ಕ್ಷೇತ್ರಗಳಲ್ಲಿ ಬಿ.ಜೆ.ಪಿ. ಸೋಲು ಕಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಪ್ರತಿನಿಧಿಸಿದ್ದ ಈ ಕ್ಷೇತ್ರಗಳಲ್ಲಿ ಸೋಲುವ ಮೂಲಕ ಬಿ.ಜೆ.ಪಿ.ಗೆ ಮುಖಭಂಗವಾಗಿದೆ.

ತವರಲ್ಲಿ ಸೋತ ಯೋಗಿ ಆದಿತ್ಯನಾಥ್ ಅವರನ್ನು ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕರೆತರುವ ಕುರಿತಾಗಿ ಬಿ.ಜೆ.ಪಿ. ವಲಯದಲ್ಲಿ ತಳಮಳ ಶುರುವಾಗಿದೆ. ಈಗಾಗಲೇ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ರಂಗೇರಿದ್ದು, ಪ್ರಧಾನಿ ನರೇಂದ್ರ ಮೋದಿ, ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಸಿ.ಎಂ. ಯೋಗಿ ಆದಿತ್ಯನಾಥ್ ಅವರು ಪ್ರಚಾರ ನಡೆಸಿದ್ದಾರೆ.

ಯೋಗಿ ರಾಜ್ಯಕ್ಕೆ ಬಂದಾಗಲೆಲ್ಲಾ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ. ಕಾನೂನು ಸುವ್ಯವಸ್ಥೆ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಬಿ.ಜೆ.ಪಿ. ಫೈರ್ ಬ್ರಾಂಡ್ ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಪ್ರಚಾರ ನಡೆಸಿದರೆ, ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಬಿ.ಜೆ.ಪಿ. ನಾಯಕರ ಲೆಕ್ಕಾಚಾರವಾಗಿದೆ. ಇದೇ ವೇಳೆ ಉತ್ತರಪ್ರದೇಶದಲ್ಲಿ ಬಿ.ಜೆ.ಪಿ.ಗೆ ಸೋಲಾಗಿರುವುದರಿಂದ ಕರ್ನಾಟಕದಲ್ಲಿ ಸ್ಟಾರ್ ಕ್ಯಾಂಪೇನರ್ ಆಗಿ ಯೋಗಿ ಆದಿತ್ಯನಾಥ್ ಅವರನ್ನು ಕರೆತರಬೇಕೆ? ಬೇಡೆವೇ? ಎಂಬ ಚರ್ಚೆ ಬಿ.ಜೆ.ಪಿ. ವಲಯದಲ್ಲಿ ಶುರುವಾದಂತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...