alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದಿರಾ ಕ್ಯಾಂಟೀನ್ ನಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮೇಲಾಧಿಕಾರಿಯೊಬ್ಬ ತನ್ನೊಂದಿಗೆ ಅಕ್ರಮ ಸಂಬಂಧ ಹೊಂದುವಂತೆ ಕ್ಯಾಶೀಯರ್ ಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿರುವ ಮಹಿಳೆ, ಇಂದಿರಾ ಕ್ಯಾಂಟೀನ್ ಮೇಲಾಧಿಕಾರಿ ತಮಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾರೆ. ಅಕ್ರಮ ಸಂಬಂಧ ಹೊಂದದಿದ್ದರೆ, ಕೆಲಸದಿಂದ ಬಿಡಿಸುವುದಾಗಿ ಬೆದರಿಸಿದ್ದಾರೆ ಎಂದು ತಿಳಿಸಿದ್ದಾರೆ.

ರಾತ್ರಿ ವೇಳೆಯೂ ಕರೆ ಮಾಡಿ ಕಿರುಕುಳ ನೀಡಿದ್ದು, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...