alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ಇಂದಿರಾ ಕ್ಯಾಂಟೀನ್ ನಲ್ಲಿ ಸಿಗಲಿದೆ ಟೀ-ಕಾಫಿ

ಬಡ ಜನತೆಗೆ ಕಡಿಮೆ ವೆಚ್ಚದಲ್ಲಿ ಶುಚಿ-ರುಚಿಯಾದ ಊಟ-ಉಪಹಾರ ದೊರೆಯಲೆಂಬ ಉದ್ದೇಶದಿಂದ ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದು, ಬಳಿಕ ಅವುಗಳನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿತ್ತು.

ಇದಾದ ಬಳಿಕ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ಹಿಂದಿನ ಸರ್ಕಾರದಲ್ಲಿ ಜಾರಿಗೊಂಡ ಬಹುತೇಕ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಬಂದಿದ್ದು, ಈ ಪೈಕಿ ಇಂದಿರಾ ಕ್ಯಾಂಟೀನ್ ಕೂಡಾ ಒಂದು.

ಇಂದಿರಾ ಕ್ಯಾಂಟೀನ್ ನಲ್ಲಿ ಊಟ-ಉಪಹಾರ ಸಿಗುತ್ತಿತ್ತಾದರೂ ಕಾಫಿ-ಟೀ ಲಭ್ಯವಿರಲಿಲ್ಲ. ಇದೀಗ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಈ ಕುರಿತು ಶುಭ ಸುದ್ದಿ ನೀಡಿದ್ದು, ಇಂದಿರಾ ಕ್ಯಾಂಟೀನ್‌ ನಲ್ಲಿ ಕಾಫಿ-ಟೀ ಕೊಡಲು ಚಿಂತನೆ ನಡೆಸಲಾಗಿದೆ. ಕಾಫಿ-ಟೀ ನೀಡಬೇಕೆಂಬ ಬೇಡಿಕೆ ಬಂದಿದ್ದು, ಅಂತೆಯೇ ಎಲ್ಲ ಕ್ಯಾಂಟೀನ್‌ ನಲ್ಲೂ ಶೀಘ್ರವೇ ಪ್ರಾರಂಭಿಸಲಾಗುವುದು. ಇನ್ನು ಇದಕ್ಕೆ ದರ ನಿಗದಿ ಮಾಡಿಲ್ಲವೆಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...