alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ಜನರಿಗೆ ಇಲ್ಲಿದೆ ಗುಡ್ ನ್ಯೂಸ್….

ಬೆಂಗಳೂರು: ರಾಜ್ಯದ ಜನರಿಗೆ ಗುಡ್ ನ್ಯೂಸ್ ಇಲ್ಲಿದೆ. ತಾಲ್ಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸರ್ಕಾರ ಮುಂದಾಗಿದೆ.

ಈಗಾಗಲೇ ಬೆಂಗಳೂರಿನಲ್ಲಿ ಬಹುತೇಕ ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಿದ್ದು, ಕಡಿಮೆ ಬೆಲೆಯಲ್ಲಿ ಜನರಿಗೆ ತಿಂಡಿ, ಊಟ ಸಿಗ್ತಿದೆ. ಇದರಿಂದ ಬಡ, ಮಧ್ಯಮ ವರ್ಗದ ಜನ, ಕಾರ್ಮಿಕರಿಗೆ ಅನುಕೂಲವಾಗಿದೆ.

ಇದೇ ಮಾದರಿಯಲ್ಲಿ ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸರ್ಕಾರ ಮುಂದಾಗಿದೆ.

ತಮಿಳುನಾಡಿನಲ್ಲಿ ಅಮ್ಮ ಕ್ಯಾಂಟೀನ್ ಜನಪ್ರಿಯವಾಗಿದ್ದು, ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದೆ. ಈ ಯೋಜನೆ ಯಶಸ್ವಿಯಾಗಿರುವುದರಿಂದ ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...