alex Certify
ಕನ್ನಡ ದುನಿಯಾ       Mobile App
       

Kannada Duniya

2 ನೇ ದಿನವೂ ಮುಂದುವರೆದ ಐ.ಟಿ. ದಾಳಿ

dali-it

ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ಮತ್ತು ಮಹಿಳಾ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಐ.ಟಿ. ಅಧಿಕಾರಿಗಳು 2 ನೇ ದಿನವೂ ಪರಿಶೀಲನೆ ಕಾರ್ಯ ಮುಂದುವರೆಸಿದ್ದಾರೆ.

ಗೋಕಾಕ್ ನಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸ ಮತ್ತು ಅವರ ಸಹೋದರ ಲಖನ್ ಜಾರಕಿಹೊಳಿ ನಿವಾಸ, ಅವರ ಬೆಂಬಲಿಗ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಾವೀದ್ ಮುಲ್ಲಾ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು.

ಬೆಳಗಾವಿಯ ಕುವೆಂಪು ನಗರದಲ್ಲಿರುವ ಲಕ್ಷ್ಮಿ ಹೆಬ್ಬಾಳ್ಕರ್ ನಿವಾಸದ ಮೇಲೆ ಕೂಡ ದಾಳಿ ನಡೆದಿದ್ದು, 2 ದಿನಗಳಿಂದ ದಾಖಲೆ ಪರಿಶೀಲನೆ ಕಾರ್ಯ ಮುಂದುವರೆದಿದೆ.

ಇವರಿಬ್ಬರ ನಿವಾಸ ಮಾತ್ರವಲ್ಲದೇ, ಸಂಬಂಧಿಕರ ಮನೆಗಳ ಮೇಲೂ ದಾಳಿ ಮಾಡಿ, ಮಹತ್ವದ ದಾಖಲೆ ಪತ್ರ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಕರ್ನಾಟಕ ಮತ್ತು ಗೋವಾ ಐ.ಟಿ. ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ಬೆಂಗಳೂರಿನಲ್ಲಿದ್ದ ಸಚಿವ ರಮೇಶ್ ಜಾರಕಿಹೊಳಿ ರಾತ್ರಿಯೇ ಗೋಕಾಕ್ ಗೆ ಆಗಮಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...