alex Certify
ಕನ್ನಡ ದುನಿಯಾ       Mobile App
       

Kannada Duniya

59 ಗಂಟೆಗಳಿಂದ ಡಿ.ಕೆ.ಶಿ. ಮನೆಯಲ್ಲಿ ಪರಿಶೀಲನೆ

59-gante-dks-dks

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸ, ಕಚೇರಿ, ಆಪ್ತರ ನಿವಾಸಗಳ ಮೇಲೆ ಐ.ಟಿ. ಅಧಿಕಾರಿಗಳು ದಾಳಿ ಮಾಡಿದ್ದಾರೆ.

3 ನೇ ದಿನವೂ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಕಳೆದ 59 ಗಂಟೆಗಳಿಂದ ನಡೆಯುತ್ತಿರುವ ಪರಿಶೀಲನೆ ಕಾರ್ಯ ಅಂತಿಮ ಹಂತಕ್ಕೆ ಬಂದಿದೆ ಎನ್ನಲಾಗಿದೆ.

ಬೆಂಗಳೂರು ಸದಾಶಿವ ನಗರ, ರಾಮನಗರದ ನಿವಾಸ, ಸಹೋದರ ಹಾಗೂ ಸಂಸದ ಡಿ.ಕೆ. ಸುರೇಶ್ ನಿವಾಸ ಮತ್ತು ಕಚೇರಿ, ನವದೆಹಲಿಯ ನಿವಾಸ, ಆಪ್ತರು, ಸಂಬಂಧಿಕರ ನಿವಾಸಗಳು ಸೇರಿ ಸುಮಾರು 70 ಸ್ಥಳಗಳಲ್ಲಿ ಐ.ಟಿ. ಅಧಿಕಾರಿಗಳು ದಾಳಿ ಮಾಡಿದ್ದರು.

ಆಗಸ್ಟ್ 2 ರ ಬೆಳಿಗ್ಗೆಯಿಂದಲೂ ನಡೆದಿರುವ ದಾಳಿಯಲ್ಲಿ ಭಾರೀ ಪ್ರಮಾಣದಲ್ಲಿ ನಗದು, ಚಿನ್ನ, ಆಸ್ತಿ ದಾಖಲೆಗಳನ್ನು ಪತ್ತೆ ಮಾಡಿ ಪರಿಶೀಲಿಸಲಾಗಿದೆ. ಜೊತೆಗೆ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...