alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಡಿ.ಕೆ. ಶಿವಕುಮಾರ್ ಗೆ ಮತ್ತೆ ಐ.ಟಿ. ಶಾಕ್

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ಮತ್ತೆ ನೋಟಿಸ್ ಜಾರಿ ಮಾಡಿದೆ.

ಡಿ.ಕೆ. ಶಿವಕುಮಾರ್ ಮತ್ತು ಕುಟುಂಬದವರು ನವೆಂಬರ್ 6 ರಂದು ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ.

ವಿಚಾರಣೆಗೆ ಶಿವಕುಮಾರ್ ಮತ್ತು ಕುಟುಂಬದವರು ಮಾತ್ರ ಆಗಮಿಸಬೇಕು. ಚಾರ್ಟರ್ಡ್ ಅಕೌಂಟೆಂಟ್ ಗಳನ್ನು ಕರೆತರಬಾರದು ಎಂದು ತಿಳಿಸಲಾಗಿದೆ.

ಶಿವಕುಮಾರ್, ಅವರ ಪತ್ನಿ, ಸಹೋದರ ಮತ್ತು ಮಕ್ಕಳು ಮಾತ್ರ ವಿಚಾರಣೆಗೆ ಆಗಮಿಸುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಸದಾಶಿವನಗರದಲ್ಲಿರುವ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ ಸೇರಿದಂತೆ ಸುಮಾರು 60 ಸ್ಥಳಗಳಲ್ಲಿ 2 ತಿಂಗಳ ಹಿಂದೆ ಐ.ಟಿ. ಅಧಿಕಾರಿಗಳು ದಾಳಿ ನಡೆಸಿದ್ದರು. ಹಗಲು, ರಾತ್ರಿ 3 ದಿನಗಳ ಕಾಲ ನಡೆದ ದಾಳಿಯ ಸಂದರ್ಭದಲ್ಲಿ ಹಲವು ಮಹತ್ವದ ದಾಖಲೆ ವಶಪಡಿಸಿಕೊಳ್ಳಲಾಗಿತ್ತು.

ಈ ದಾಖಲೆಗಳಿಗೆ ಸಂಬಂಧಿಸಿದಂತೆ ಶಿವಕುಮಾರ್ ಅವರನ್ನು ಐ.ಟಿ. ಕಚೇರಿಗೆ ಕರೆಸಿಕೊಂಡು ಮಾಹಿತಿ ಪಡೆಯಲಾಗಿತ್ತು. ಈಗ ಮತ್ತೆ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಕುಟುಂಬದವರೊಂದಿಗೆ ಮಾತ್ರ ವಿಚಾರಣೆಗೆ ಬರಬೇಕು. ಲೆಕ್ಕಪರಿಶೋಧಕರನ್ನು ಕರೆತರಬಾರದು ಎಂದು ನಿರ್ಬಂಧ ಹಾಕಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...