alex Certify
ಕನ್ನಡ ದುನಿಯಾ       Mobile App
       

Kannada Duniya

ಜಯದೇವ ಆಸ್ಪತ್ರೆಗೆ ದಾಖಲಾದ ರವಿ ಬೆಳಗೆರೆ

ಬೆಂಗಳೂರು: ಡಯಾಬಿಟಿಸ್, ಬಿ.ಪಿ., ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ರವಿ ಬೆಳಗೆರೆ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ವೈದ್ಯರು ಆರೋಗ್ಯ ತಪಾಸಣೆ ಮಾಡಿದ್ದು, ವಿವಿಧ ಪರೀಕ್ಷೆಗಳನ್ನು ಮಾಡಲಾಗುವುದು. ರಾತ್ರಿ ಅವರು ಮನೆ ಊಟ ಮಾಡಿದ್ದಾರೆ. ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅವರ ಭದ್ರತೆಗೆ ನಿಯೋಜಿಸಲಾಗಿದೆ.

ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ರವಿ ಬೆಳಗೆರೆ ಸುಪಾರಿ ನೀಡಿದ್ದಾಗಿ ಬಂಧಿತ ಶಶಿಧರ ಮುಂಡೆವಾಡಿ ಮಾಹಿತಿ ನೀಡಿದ್ದು, ಸಿ.ಸಿ.ಬಿ. ಪೊಲೀಸರು ರವಿ ಬೆಳಗೆರೆ ಅವರನ್ನು ಬಂಧಿಸಿದ್ದರು. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು.

ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ಮಾಡಲಾಗಿತ್ತು. ಅನಾರೋಗ್ಯದ ಕಾರಣ, ನಿನ್ನೆ ಸೆಷನ್ಸ್ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...