alex Certify
ಕನ್ನಡ ದುನಿಯಾ       Mobile App
       

Kannada Duniya

ಜೈಲಲ್ಲಿ ಇನ್ನೂ ಕಡಿಮೆಯಾಗಿಲ್ಲ ಶಶಿಕಲಾ ದರ್ಬಾರ್…?

ಬೆಂಗಳೂರು: ತಮಿಳುನಾಡು ಮಾಜಿ ಸಿ.ಎಂ. ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾ ನಟರಾಜನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಲಾಗುತ್ತಿದೆ ಎಂಬ ವಿಚಾರ ಕೆಲವು ತಿಂಗಳ ಹಿಂದಷ್ಟೇ ಭಾರೀ ಸುದ್ದಿಯಾಗಿತ್ತು.

ಈಗ ಮತ್ತೊಂದು ಮಾಹಿತಿ ಹೊರಬಿದ್ದಿದೆ. ಜೈಲಲ್ಲಿ ಸಾಮಾನ್ಯ ಕೈದಿಗಳಂತೆ ಬಿಳಿ ಬಟ್ಟೆಯನ್ನು ಧರಿಸದೇ, ಶಶಿಕಲಾ ನಟರಾಜನ್, ಜೆ. ಇಳವರಸಿ ಬಣ್ಣದ ಬಟ್ಟೆಗಳನ್ನು ತೊಡುತ್ತಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಶಶಿಕಲಾ ಮತ್ತು ಇಳವರಸಿ ಬಣ್ಣದ ಬಟ್ಟೆಗಳನ್ನು ಧರಿಸಿರುವುದು ಕಂಡು ಬಂದಿದ್ದು, ಈ ಬಗ್ಗೆ ಜೈಲಿನ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಅಧಿಕಾರಿಗಳು ಏನೇನೋ ಸಬೂಬು ಹೇಳಿದ್ದು, ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಅಧ್ಯಕ್ಷರು, ಲಿಖಿತವಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಿದ್ದಾರೆ. ಪರಿಶೀಲನೆ ನಡೆಸಿದಾಗ, ಶಶಿಕಲಾ ಅವರ ಬಳಿ ಬ್ರ್ಯಾಂಡೆಡ್ ಬಟ್ಟೆಗಳು ಕಂಡು ಬಂದಿವೆ. ಶಶಿಕಲಾ ಅವರನ್ನು ಈ ಕುರಿತು ಪ್ರಶ್ನಿಸಿದಾಗ, ಮೌನವಾಗಿದ್ದರು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...