alex Certify
ಕನ್ನಡ ದುನಿಯಾ       Mobile App
       

Kannada Duniya

ಗಣಿಧಣಿ ಜನಾರ್ದನ ರೆಡ್ಡಿಗೆ ಇಂದಾದರೂ ಸಿಗುತ್ತಾ ಜಾಮೀನು…?

ಡೀಲ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಇಂದಾದರೂ ಜಾಮೀನು ಸಿಗುತ್ತಾ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

ಶನಿವಾರದಂದು ಜನಾರ್ದನ ರೆಡ್ಡಿಯವರ ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ಭಾನುವಾರದಂದು ಅವರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ವೇಳೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಬಳಿಕ ಜನಾರ್ದನ ರೆಡ್ಡಿ ಅವರನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರಿಸಲಾಗಿದ್ದು, ಜಾಮೀನು ಕೋರಿ ಜನಾರ್ದನ ರೆಡ್ಡಿ ಸೋಮವಾರದಂದು ಅರ್ಜಿ ಸಲ್ಲಿಸಬೇಕಿತ್ತು.

ಆದರೆ ಕೇಂದ್ರ ಸಚಿವ ಅನಂತಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೋಮವಾರದಂದು ಸರ್ಕಾರಿ ರಜೆ ಘೋಷಿಸಿದ್ದು, ಹೀಗಾಗಿ ಕೋರ್ಟ್ ಕಲಾಪ ನಡೆಯದ ಕಾರಣ ಸೋಮವಾರ ಸಲ್ಲಿಸಬೇಕಿದ್ದ ಜನಾರ್ದನ ರೆಡ್ಡಿಯವರ ಜಾಮೀನು ಅರ್ಜಿ ಇಂದು ಸಲ್ಲಿಕೆಯಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...