alex Certify
ಕನ್ನಡ ದುನಿಯಾ       Mobile App
       

Kannada Duniya

ಮೊಳಕಾಲ್ಮೂರಿನಲ್ಲಿ ಮನೆ ಮಾಡುತ್ತಿದ್ದಾರೆ ಜನಾರ್ದನ ರೆಡ್ಡಿ

ಬಳ್ಳಾರಿ ಜಿಲ್ಲೆಯಲ್ಲಿ ತಮ್ಮ ಭದ್ರ ಕೋಟೆಗೆ ಕೈ ಹಾಕಿರುವ ಕಾಂಗ್ರೆಸ್, ಕೆಲ ಶಾಸಕರುಗಳನ್ನು ತನ್ನ ತೆಕ್ಕೆಗೆ ಎಳೆದುಕೊಳ್ಳುವಲ್ಲಿ ಯಶಸ್ವಿಯಾಗಿರುವುದರಿಂದ ಕನಲಿ ಕೆಂಡವಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತೆ ತಮ್ಮ ಪ್ರಾಬಲ್ಯ ಸ್ಥಾಪಿಸಲು ಮುಂದಾಗಿದ್ದಾರೆನ್ನಲಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯಿಂದ ತಮ್ಮ ಬೆಂಬಲಿಗ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಬರುವ ಸಲುವಾಗಿ ವೇದಿಕೆ ಸಿದ್ದಪಡಿಸುತ್ತಿರುವ ಜನಾರ್ದನ ರೆಡ್ಡಿಯವರು ಇದಕ್ಕಾಗಿ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರಿನಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆನ್ನಲಾಗಿದೆ.

ಅಕ್ರಮ ಗಣಿಗಾರಿಕೆ ಆರೋಪದ ಹಿನ್ನಲೆಯಲ್ಲಿ ಬಳ್ಳಾರಿ ಜಿಲ್ಲೆಗೆ ತೆರಳದಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಹೀಗಾಗಿ ಬಳ್ಳಾರಿಯಿಂದ 50 ಕಿ.ಮೀ. ದೂರದಲ್ಲಿರುವ ಮೊಳಕಾಲ್ಮೂರಿನಲ್ಲಿ ವಾಸ್ತವ್ಯ ಹೂಡುವ ಮೂಲಕ ಚುನಾವಣೆ ಸಂದರ್ಭದಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ ಎನ್ನಲಾಗಿದೆ. ಹೀಗಾಗಲೇ ಮೊಳಕಾಲ್ಮೂರಿನಲ್ಲಿ ಮನೆಯೊಂದನ್ನು ಅವರು ಬೆಂಬಲಿಗರು ನೋಡಿದ್ದು, ಖುದ್ದು ಜನಾರ್ದನ ರೆಡ್ಡಿಯವರೂ ಕೂಡಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...