alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾವಣನ ಸಂಹಾರಕ್ಕೆ ಶ್ರೀರಾಮನ ಆಗಮನವಾಗಿದೆ ಎಂದ ಜನಾರ್ಧನ ರೆಡ್ಡಿ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಟ್ವೀಟ್ ಹಾಗೂ ಮಾತಿನ ಸಮರ ತಾರಕಕ್ಕೇರಿದ್ದು, ಶ್ರೀರಾಮುಲು, ರೆಡ್ಡಿ ಸಹೋದರರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ ಟ್ವೀಟ್ ಮಾಜಿ ಸಚಿವ ಜನಾರ್ಧನ ರೆಡ್ಡಿಯವರನ್ನು ಕೆರಳಿಸಿದ್ದು, ಸಿದ್ದರಾಮಯ್ಯನವರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಸ್ನೇಹಿತ ಶ್ರೀರಾಮುಲು ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಜನಾರ್ಧನ ರೆಡ್ಡಿ, ಕೋನಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಸ್ಪರ್ಧಿಸಿರುವ ಬಾದಾಮಿ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳಲ್ಲಿ ಸೋಲನ್ನಪ್ಪಲಿದ್ದಾರೆಂದು ಭವಿಷ್ಯ ನುಡಿದಿದ್ದಾರೆ.

ಸಿದ್ದರಾವಣನ ಸಂಹಾರಕ್ಕಾಗಿಯೇ ಶ್ರೀರಾಮನ ಆಗಮನವಾಗಿದೆ ಎಂದು ಬಾದಾಮಿ ಕ್ಷೇತ್ರದಲ್ಲಿ ಶ್ರೀರಾಮುಲು ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯನವರು ರೆಡ್ಡಿ ಸಹೋದರರಿಂದ ಹಣ ವಶಪಡಿಸಿಕೊಳ್ಳುವುದಾಗಿ ಹೇಳಿದ್ದರು. ಆದರೆ ಒಂದು ರೂಪಾಯಿಯನ್ನು ಪಡೆಯಲಾಗಿಲ್ಲವೆಂದು ಜನಾರ್ಧನ ರೆಡ್ಡಿ ವ್ಯಂಗ್ಯವಾಡಿದರಲ್ಲದೇ ಹಿಂದುಳಿದ ವರ್ಗಗಳ ನಾಯಕ ಶ್ರೀರಾಮುಲು ಗೆಲುವು ಶತಸಿದ್ದ ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...