alex Certify
ಕನ್ನಡ ದುನಿಯಾ       Mobile App
       

Kannada Duniya

‘ಮಕ್ಕಳ ಅನ್ನ ಕಿತ್ತುಕೊಳ್ಳುವವರು ರಾಕ್ಷಸರು’

pujari-jan

ಮಂಗಳೂರು: ಹಸಿದ ಮಕ್ಕಳಿಗೆ ಅನ್ನವನ್ನು ಕೊಡುವುದು ಪುಣ್ಯದ ಕೆಲಸ. ಮಕ್ಕಳ ಅನ್ನ ಕಸಿದುಕೊಳ್ಳುವವರು ರಾಕ್ಷಸರು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಹೇಳಿದ್ದಾರೆ.

ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರ, ಪುಣಚದ ಶ್ರೀದೇವಿ ವಿದ್ಯಾ ಕೇಂದ್ರಗಳಿಗೆ ಕೊಲ್ಲೂರು ದೇವಸ್ಥಾನದಿಂದ ನೀಡಲಾಗುತ್ತಿದ್ದ ಬಿಸಿಯೂಟದ ಅನುದಾನವನ್ನು ಸರ್ಕಾರ ಸ್ಥಗಿತಗೊಳಿಸಿದೆ. ಇಂತಹ ನಿರ್ಧಾರ ಅಕ್ಷಮ್ಯ ಅಪರಾಧ ಎಂದಿದ್ದಾರೆ.

ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ನೀಡುತ್ತಿದ್ದ ಅನುದಾನ ರದ್ದು ಮಾಡಿರುವುದು ಸರಿಯಲ್ಲ. ಕಲ್ಲಡ್ಕ ಪ್ರಭಾಕರ ಭಟ್ಟರು ಶಾಲೆ ನಡೆಸುತ್ತಿದ್ದಾರೆ. ಅವರೇನು ಕಳ್ಳತನ ಮಾಡಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಭೀಕರ ಬರಗಾಲದ ಛಾಯೆ ಆವರಿಸಿದೆ. ಜನರ ಕಷ್ಟಗಳಿಗೆ ಸ್ಪಂದಿಸಬೇಕಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ನಿದ್ದೆ ಮಾಡುತ್ತಿದ್ದಾರೆ. ಅವರು ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದಲ್ಲಿ ಮುಂದಿನ ಚುನಾವಣೆಯಲ್ಲಿ ಜನ ತಕ್ಕ ಪಾಠವನ್ನು ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...