alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ರಾಜಕಾರಣಕ್ಕೆ ಬಿಗ್ ‘ಟ್ವಿಸ್ಟ್’: ಜಾರಕಿಹೊಳಿ ಸಹೋದರರ ಜೊತೆ ಕೈಜೋಡಿಸಿದ ಮತ್ತಷ್ಟು ಶಾಸಕರು

ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಬೆಳಗಾವಿಯ ಪಿ.ಎಲ್.ಡಿ. ಬ್ಯಾಂಕ್ ಚುನಾವಣೆಯನ್ನು ಮುಂದಿಟ್ಟುಕೊಂಡು ಜಾರಕಿಹೊಳಿ ಸಹೋದರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿರುವ ಮಧ್ಯೆ ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕಾರ್ಯ ವೈಖರಿಗೆ ಬೇಸತ್ತಿರುವ ಮತ್ತಷ್ಟು ಶಾಸಕರು ಅವರುಗಳ ಜೊತೆ ಕೈ ಜೋಡಿಸಿದ್ದಾರೆಂದು ಹೇಳಲಾಗಿದೆ.

ಕಳೆದ ರಾತ್ರಿ ಶಾಸಕ ಸುಧಾಕರ್ ಅವರ ನಿವಾಸದಲ್ಲಿ ಅತೃಪ್ತ ಶಾಸಕರ ಸಭೆ ನಡೆದಿದೆ ಎನ್ನಲಾಗಿದ್ದು, ಇದರಲ್ಲಿ ಜಾರಕಿಹೊಳಿ ಸಹೋದರರೂ ಸಹ ಪಾಲ್ಗೊಂಡಿದ್ದರೆಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಪಾಲ್ಗೊಂಡವರು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸರ್ಕಾರದಲ್ಲಿ ತಮ್ಮ ತಮ್ಮ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರೆಂದು ತಿಳಿದುಬಂದಿದೆ.

ಮುಖ್ಯಮಂತ್ರಿಯವರನ್ನು ಈ ಕುರಿತು ಭೇಟಿ ಮಾಡಿದರೆ ಆಯ್ತು ಬ್ರದರ್ ಎನ್ನುತ್ತಾರೆ. ಆದರೆ ಬಳಿಕ ಅದನ್ನು ನಿರ್ಲಕ್ಷಿಸುತ್ತಾರೆ, ಅಲ್ಲದೆ ಪತ್ರ ಬರೆದರೆ ಅದಕ್ಕೆ ಸ್ಪಂದಿಸುವುದಿಲ್ಲವೆಂದು ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕರುಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದರೆಂದು ಹೇಳಲಾಗಿದೆ. ಡಿಕೆ ಶಿವಕುಮಾರ್ ಮೇಲಿನ ಜಾರಕಿಹೊಳಿ ಸಹೋದರರ ಅಸಮಾಧಾನ ಈಗ ನಿಧಾನವಾಗಿ ಮುಖ್ಯಮಂತ್ರಿಗಳತ್ತ ತಿರುಗತೊಡಗಿದ್ದು, ಮುಂದಿನ ದಿನಗಳಲ್ಲಿ ಮತ್ಯಾವ ಬೆಳವಣಿಗೆಗಳು ಘಟಿಸುತ್ತದೆಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...