alex Certify
ಕನ್ನಡ ದುನಿಯಾ       Mobile App
       

Kannada Duniya

ಮಧು ಬಂಗಾರಪ್ಪ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸಚಿವೆ ಜಯಮಾಲ

ಶಿವಮೊಗ್ಗ: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಗೆದ್ದೇ ಗೆಲ್ಲುವ ವಿಶ್ವಾಸವಿದೆ ಎಂದು ಸಚಿವೆ ಜಯಮಾಲ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಕ್ತವಾದ ಅಭ್ಯರ್ಥಿಯಾಗಿ ಎಸ್. ಬಂಗಾರಪ್ಪನವರ ಪುತ್ರ ಡೈನಾಮಿಕ್ ವರ್ಚಸ್ಸು ಇರುವ ಮಧು ಬಂಗಾರಪ್ಪ ಅವರನ್ನು ಆಯ್ಕೆ ಮಾಡಿದ್ದು ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರು ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದರು.

ಅತಿ ಹೆಚ್ಚು ಮತಗಳ ಅಂತರದಿಂದ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸುತ್ತೇವೆ ಎಂಬ ವಿಶ್ವಾಸವಿದೆ. ಈಗಾಗಲೆ ಪ್ರಚಾರ ನಡೆಸಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಮಗೆ ಬೈಂದೂರು ಕ್ಷೇತ್ರ ವಹಿಸಿದ್ದು ಅಲ್ಲಿ ಪ್ರಚಾರ ನಡೆಸಿದ್ದೇನೆ ಎಂದು ಹೇಳಿದರು.

ಶಬರಿಮಲೆ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಈ ವಿಚಾರಕ್ಕೆ ಸಂಬಂಧಿಸಿದಂತೆ ತಾವು 6 ವರ್ಷಗಳ ಕಾಲ ಹೋರಾಟ ಮಾಡಿ ಗೆದ್ದಿದ್ದೇನೆ. ನನ್ನ ನಿಲುವು ಒಂದೇ ಆಗಿದೆ. ನನಗೆ ಸಂವಿಧಾನ, ಕಾನೂನಿನ ಮೇಲೆ ನಂಬಿಕೆ ಇದೆ. ಕೋರ್ಟ್ ತೀರ್ಪನ್ನು ಗೌರವಿಸುತ್ತೇನೆ ಎಂದು ಹೇಳಿದರು.

ದೇವರು ಎನ್ನುವುದು ನಂಬಿಕೆಯ ವಿಷಯವಾಗಿದ್ದು, ದೇವರನ್ನು ಕಣ್ತುಂಬಿಕೊಳ್ಳಲು ಅವಕಾಶ ಕೊಡಲಾಗಿದೆ. ಯಾರನ್ನು ದಿಕ್ಕರಿಸಿ ಹೋಗುವುದಲ್ಲ. ಪರಮಾತ್ಮನನ್ನು ನೋಡಲು, ಬೇಡಲು, ದರ್ಶನ ಪಡೆಯಲು ಭಕ್ತಿ ಮಾರ್ಗದ ಬಗ್ಗೆ ಇಷ್ಟೊಂದು ಚರ್ಚೆ ಮಾಡುವುದು ನೋವಾಗುತ್ತಿದೆ ಎಂದರು.

ಮೀ ಟೂ ಅಭಿಯಾನದ ಬಗ್ಗೆ ತಾವು ಪ್ರತಿಕ್ರಿಯೆ ನೀಡುವುದಿಲ್ಲ. ನಟಿ ಶೃತಿ ಹರಿಹರನ್ ಮತ್ತು ನಟ ಅರ್ಜುನ್ ಸರ್ಜಾ ಅವರ ವಿಚಾರದ ಬಗ್ಗೆ ನನಗೆ ತಿಳಿದಿಲ್ಲ. ಅವರೊಂದಿಗೆ ಚರ್ಚಿಸಿ ಪ್ರತಿಕ್ರಿಯೆ ನೀಡುತ್ತೇನೆ. ನಾನು ಸಚಿವೆಯಾಗಿ ಪ್ರಸ್ತುತ ಉಪ ಚುನಾವಣೆಯಲ್ಲಿ ಪ್ರಚಾರದಲ್ಲಿ ತೊಡಗಿದ್ಧೇನೆ ಎಂದು ಹೇಳಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...