alex Certify
ಕನ್ನಡ ದುನಿಯಾ       Mobile App
       

Kannada Duniya

ಜಯನಗರದ ಗೆಲುವಿನೊಂದಿಗೆ ಶಾಸಕರ ಸಂಖ್ಯಾಬಲ ಹೆಚ್ಚಿಸಿಕೊಂಡ ಕಾಂಗ್ರೆಸ್

ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ವಿಜಯ ಕುಮಾರ್ ಅವರ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಜಯನಗರ ಕ್ಷೇತ್ರದ ವಿಧಾನಸಭಾ ಚುನಾವಣೆ ಸೋಮವಾರದಂದು ನಡೆದಿದ್ದು, ಇಂದು ಫಲಿತಾಂಶ ಹೊರಬಿದ್ದಿದೆ.

ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೌಮ್ಯಾ ರೆಡ್ಡಿ, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಪ್ರಹ್ಲಾದ್ ಬಾಬು ಅವರನ್ನು ಸೋಲಿಸುವ ಮೂಲಕ ಮೊದಲ ಚುನಾವಣೆಯಲ್ಲಿಯೇ ವಿಧಾನಸಭೆ ಪ್ರವೇಶಿಸುವಲ್ಲಿ ಸಫಲರಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಅವರ ವಿರೋಧದ ನಡುವೆಯೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಯತ್ನದ ಕಾರಣಕ್ಕಾಗಿ ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾದ ಸೌಮ್ಯಾ ರೆಡ್ಡಿ, ಈಗ ಗೆಲುವಿನ ನಗೆ ಬೀರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಶಾಸಕರ ಸಂಖ್ಯಾಬಲದ ಕಾರಣಕ್ಕೆ ಈ ಚುನಾವಣೆ ಮಹತ್ವ ಪಡೆದಿತ್ತು.

ಇಂದಿನ ಗೆಲುವಿನಿಂದ ಕಾಂಗ್ರೆಸ್ ಶಾಸಕರ ಸಂಖ್ಯಾಬಲ 79 ಕ್ಕೆ ಏರಿಕೆಯಾಗಿದೆ. ಕೆಲ ದಿನಗಳ ಹಿಂದೆ ನಡೆದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಮೈತ್ರಿ ಕೂಟ ಸರ್ಕಾರದ ಬಲ ಈಗ 118 ಕ್ಕೆ ಏರಿಕೆಯಾಗಿದ್ದು, ಕಾಂಗ್ರೆಸ್ 79, ಜೆಡಿಎಸ್ 37 ಹಾಗೂ ಪಕ್ಷೇತರ 2 ಶಾಸಕರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...