alex Certify
ಕನ್ನಡ ದುನಿಯಾ       Mobile App
       

Kannada Duniya

ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ

ಅಭ್ಯರ್ಥಿಯ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಜೂನ್ 11ರಂದು ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಈಗ ತೆರೆ ಬಿದ್ದಿದೆ.

ಗೆಲುವಿಗಾಗಿ ಅಭ್ಯರ್ಥಿಗಳು ತೆರೆಮರೆಯ ಕಸರತ್ತು ನಡೆಸುತ್ತಿದ್ದು, ಬಿಜೆಪಿ ಬೆಂಬಲಿಗರೊಬ್ಬರ ಮನೆಯಲ್ಲಿ ಮದ್ಯ ಹಾಗೂ ಹಣ ಸಂಗ್ರಹಿಸಲಾಗಿದೆ ಎಂಬ ಅನುಮಾನದ ಮೇರೆಗೆ ಕಳೆದ ರಾತ್ರಿ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ ಅಲ್ಲಿ ಏನೂ ಸಿಕ್ಕಿಲ್ಲ.

ಜಯನಗರ ಕ್ಷೇತ್ರದಲ್ಲಿ ಒಟ್ಟು 19 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು, ಜೆಡಿಎಸ್ ಅಭ್ಯರ್ಥಿ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರನ್ನು ಬೆಂಬಲಿಸಿದ್ದಾರೆ.

ಮೇ 12 ರಂದು ನಡೆದ ವಿಧಾನಸಭಾ ಚುನಾವಣೆಯ ಬಳಿಕ ನಡೆಯುತ್ತಿರುವ ಎರಡನೇ ಚುನಾವಣೆ ಇದಾಗಿದ್ದು, ಈ ಹಿಂದೆ ನಡೆದ ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗಿದ್ದರು. ಯಾವುದೇ ಪಕ್ಷಕ್ಕೆ ಬಹುಮತ ಬಾರದೆ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಧಿಕಾರದಲ್ಲಿರುವ ಕಾರಣ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಈಗ ಎಲ್ಲರ ಕುತೂಹಲ ಕೆರಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...