alex Certify
ಕನ್ನಡ ದುನಿಯಾ       Mobile App
       

Kannada Duniya

ಜಯನಗರ ಸೋಲಿಗೆ ಬಿಜೆಪಿ ಹೈಕಮಾಂಡ್ ಗರಂ…!

ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಸೋಮವಾರದಂದು ನಡೆದಿದ್ದು, ಇಂದು ಫಲಿತಾಂಶ ಹೊರ ಬಿದ್ದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕರು ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರ ಈ ಬಾರಿ ಕಾಂಗ್ರೆಸ್ ಪಾಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನಲೆಯಲ್ಲಿ ಶಾಸಕರ ಸಂಖ್ಯಾಬಲದ ಕಾರಣಕ್ಕಾಗಿಯೂ ಈ ಚುನಾವಣೆ ಮಹತ್ವ ಪಡೆದಿತ್ತು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ವಿಜಯ ಸಾಧಿಸಿದ್ದ ಬಿಜೆಪಿ ಈ ಬಾರಿ ಪರಾಭವಗೊಂಡಿದೆ.

ಅದರಲ್ಲೂ ಈ ಕ್ಷೇತ್ರ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಲೋಕಸಭಾ ವ್ಯಾಪ್ತಿಯಲ್ಲಿ ಬರುತ್ತಿರುವುದು ಗಮನಾರ್ಹ. ಈ ಹಿನ್ನಲೆಯಲ್ಲಿ ಅನಂತ್ ಕುಮಾರ್ ಜೊತೆ ಮಾತುಕತೆ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ಸೋಲಿನ ಕುರಿತು ಕ್ಲಾಸ್ ತೆಗೆದುಕೊಂಡಿದ್ದಾರೆನ್ನಲಾಗಿದೆ. ಕಡಿಮೆ ಅಂತರದಲ್ಲಿ ಸೋಲನ್ನಪ್ಪಿರುವುದಾಗಿ ಅನಂತ್ ಕುಮಾರ್ ಹೇಳಿದರೂ ಸಹ ಅದನ್ನೊಪ್ಪದ ಅಮಿತ್ ಷಾ, ಸ್ಥಳೀಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ನಾಯಕರು ವಿಫಲರಾಗಿದ್ದಾರೆಂದು ತಮ್ಮದೇ ಮೂಲಗಳಿಂದ ತರಿಸಿಕೊಂಡ ವರದಿಯ ಆಧಾರದ ಮೇಲೆ ಹೇಳಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...