alex Certify
ಕನ್ನಡ ದುನಿಯಾ       Mobile App
       

Kannada Duniya

ಯಾರ ಕೊರಳಿಗೆ ಬೀಳಲಿದೆ ಜಯನಗರದ ವಿಜಯಮಾಲೆ?

ಬಿಜೆಪಿ ಅಭ್ಯರ್ಥಿ ವಿಜಯ ಕುಮಾರ್ ಅವರ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಸೋಮವಾರದಂದು ನಡೆದಿದ್ದು, ಇಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರದಲ್ಲಿದ್ದು, ಶಾಸಕರ ಸಂಖ್ಯಾಬಲದ ದೃಷ್ಟಿಯಿಂದಲೂ ಈ ಚುನಾವಣೆ ಮಹತ್ವ ಪಡೆದಿದೆ.

ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರನ್ನು ಬೆಂಬಲಿಸಿದರೆ, ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ವಿಜಯ ಕುಮಾರ್ ಅವರ ಸಹೋದರ ಪ್ರಹ್ಲಾದ್ ಬಾಬು ಅವರನ್ನು ಕಣಕ್ಕಿಳಿಸಿದೆ. ಇನ್ನು ಪಕ್ಷೇತರ ಅಭ್ಯರ್ಥಿಯಾಗಿ ರವಿ ಕೃಷ್ಣಾರೆಡ್ಡಿ ಕಣದಲ್ಲಿದ್ದು, ಕ್ಷೇತ್ರದಲ್ಲಿ ಒಟ್ಟು 19 ಮಂದಿ ಸ್ಪರ್ಧೆಗಿಳಿದಿದ್ದರು. ಇಂದು ಮತ ಎಣಿಕೆ ನಡೆಯುತ್ತಿದ್ದು, ಜಯನಗರದ ವಿಜಯ ಮಾಲೆ ಯಾರ ಕೊರಳಿಗೆ ಬೀರಲಿದೆ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...