alex Certify
ಕನ್ನಡ ದುನಿಯಾ       Mobile App
       

Kannada Duniya

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.55 ರಷ್ಟು ಮತದಾನ

ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಸೋಮವಾರದಂದು ನಡೆದಿದ್ದು, ಶೇಕಡಾ 55 ರಷ್ಟು ಮತದಾನವಾಗಿದೆ.

ಒಟ್ಟು 19 ಮಂದಿ ಚುನಾವಣಾ ಕಣದಲ್ಲಿದ್ದು, ಕಾಂಗ್ರೆಸ್-ಬಿಜೆಪಿ ಮಧ್ಯೆ ಪ್ರಬಲ ಪೈಪೋಟಿ ನಡೆದಿದೆ. ಈ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಜೆಡಿಎಸ್ ಅಭ್ಯರ್ಥಿ, ಬಳಿಕ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರನ್ನು ಬೆಂಬಲಿಸಿ ಕಣದಿಂದ ಹಿಂದೆ ಸರಿದಿದ್ದರು.

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದು, ಶಾಸಕರ ಸಂಖ್ಯಾಬಲದ ಕಾರಣಕ್ಕೆ ಈ ಚುನಾವಣೆ ಮಹತ್ವ ಪಡೆದಿದೆ. ಜೂನ್ 13ರಂದು ಮತ ಎಣಿಕೆ ನಡೆಯಲಿದ್ದು, ವಿಜಯಮಾಲೆ ಯಾರ ಕೊರಳಿಗೆ ಬೀಳಲಿದೆ ಎಂದು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...