alex Certify
ಕನ್ನಡ ದುನಿಯಾ       Mobile App
       

Kannada Duniya

ಜಯನಗರ ವಿಧಾನಸಭಾ ಚುನಾವಣೆಗೆ ಆರಂಭಗೊಂಡ ಮತದಾನ

ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ನಿಧನರಾದ ಹಿನ್ನೆಲೆಯಲ್ಲಿ ಇಂದಿಗೆ ಮುಂದೂಡಲ್ಪಟ್ಟಿದ್ದ ಚುನಾವಣೆಗೆ ಮತದಾನ ಆರಂಭವಾಗಿದೆ.

ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಒಟ್ಟು 19 ಮಂದಿ ಚುನಾವಣಾ ಕಣದಲ್ಲಿದ್ದು, ಕಾಂಗ್ರೆಸ್ ನಿಂದ ಸೌಮ್ಯಾ ರೆಡ್ಡಿ, ಬಿಜೆಪಿಯಿಂದ ಪ್ರಹ್ಲಾದ್ ಬಾಬು, ಪಕ್ಷೇತರ ಅಭ್ಯರ್ಥಿಯಾಗಿ ರವಿಕೃಷ್ಣಾರೆಡ್ಡಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಿದ್ದ  ಜೆಡಿಎಸ್ ಅಭ್ಯರ್ಥಿ ಕಾಳೇಗೌಡ ಈಗಾಗಲೇ ಕಣದಿಂದ ಹಿಂದೆ ಸರಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರನ್ನು ಬೆಂಬಲಿಸಿದ್ದಾರೆ. ಮತದಾನಕ್ಕೆ ಒಂದು ದಿನ ಇರುವಾಗ ಎಂ ಇ ಪಿ ಅಭ್ಯರ್ಥಿ ಸೈಯದ್ ಜಬಿ ಕೂಡ ತಾವು ಕಣದಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಶಾಸಕರ ಸಂಖ್ಯಾಬಲದ ಕಾರಣಕ್ಕೂ ಈ ಚುನಾವಣೆ ಮಹತ್ವ ಪಡೆದಿದೆ.

ಜೂನ್ 13ರಂದು ಜಯನಗರ ಟಿ ಬ್ಲಾಕ್ ನಲ್ಲಿರುವ ಎನ್ ಎಂ ಕೆ ಆರ್ ವಿ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...