alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ

ಜಯನಗರ ಕ್ಷೇತ್ರದ ಚುನಾವಣೆಗೆ 5 ದಿನಗಳು ಬಾಕಿ ಇರುವಂತೆಯೇ ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರಿಗೆ ಅಧಿಕೃತವಾಗಿ ಬೆಂಬಲ ಘೋಷಣೆ ಮಾಡಿದೆ. ಈ ಮೂಲಕ ಬಿಜೆಪಿ-ಕಾಂಗ್ರೆಸ್ ನೇರ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ.

ಜೆಡಿಎಸ್ ಪಕ್ಷ ಈ ಕುರಿತು ಅಧಿಕೃತವಾದ ಘೋಷಣೆ ಮಾಡಿದೆ. ಜಯನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕಾಳೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರಿಗೆ ಬೆಂಬಲ ಘೋಷಣೆ ಮಾಡಿದ್ದು, ಕಣದಿಂದ ಹಿಂದೆ ಸರಿಯುವಂತೆ ಪಕ್ಷದ ವರಿಷ್ಠ ಹೆಚ್‍.ಡಿ. ದೇವೇಗೌಡ ತಿಳಿಸಿದ್ದಾರೆ ಎನ್ನಲಾಗಿದೆ.

ಜೂನ್ 11ರಂದು ಜಯನಗರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಜೂನ್ 16ರಂದು ಫಲಿತಾಂಶ ಪ್ರಕಟವಾಗಲಿದೆ. ಜೆಡಿಎಸ್ ಪಕ್ಷ, ಕಾಂಗ್ರೆಸ್ ಬೆಂಬಲಿಸಿದ್ದರಿಂದ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನೇರ ಪೈಪೋಟಿಗೆ ವೇದಿಕೆ ಸಿದ್ಧವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...