alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿ ಅಮೂಲ್ಯ ಜೆಡಿಎಸ್ ಸೇರ್ಪಡೆ

ವಿಧಾನಸಭಾ ಚುನಾವಣೆಗೆ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಈಗಾಗಲೇ ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ.

ಈ ಮಧ್ಯೆ ವಿವಿಧ ಪಕ್ಷಗಳಲ್ಲಿ ಟಿಕೇಟ್ ಆಕಾಂಕ್ಷಿಗಳಾಗಿದ್ದವರು ತಮಗೆ ಅವಕಾಶ ಕೈ ತಪ್ಪುತ್ತಿದ್ದಂತೆಯೇ ಮತ್ತೊಂದು ಪಕ್ಷದತ್ತ ಮುಖ ಮಾಡುತ್ತಿದ್ದು, ಬೆಂಗಳೂರಿನ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಚಿತ್ರ ನಟಿ ಅಮೂಲ್ಯರವರ ಮಾವ ಮಾಜಿ ಕಾರ್ಪೋರೇಟರ್ ರಾಮಚಂದ್ರ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಛೇರಿಯಲ್ಲಿ ಪಕ್ಷದ ವರಿಷ್ಟ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ರಾಮಚಂದ್ರರನ್ನು ಪಕ್ಷಕ್ಕೆ ಬರ ಮಾಡಿಕೊಂಡಿದ್ದು, ಈ ವೇಳೆ ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ಕೂಡಾ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅಮೂಲ್ಯ, ತಮಗೆ ರಾಜಕೀಯದ ಅನುಭವವಿಲ್ಲ. ಆದರೆ ಮಾವ ರಾಮಚಂದ್ರರಿಗೆ ಟಿಕೆಟ್ ಸಿಕ್ಕರೆ ಅವರ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...