alex Certify
ಕನ್ನಡ ದುನಿಯಾ       Mobile App
       

Kannada Duniya

‘ಕೆಲಸ ಮಾಡದವರಿಗೆ JDS ನಿಂದ ಗೇಟ್ ಪಾಸ್’

ಬೆಂಗಳೂರು: ‘ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳದೇ, ಪಕ್ಷದ ಕೆಲಸ ಮಾಡದೇ, ಕೇವಲ ವಿಸಿಟಿಂಗ್ ಕಾರ್ಡ್ ಇಟ್ಟುಕೊಂಡು ಓಡಾಡುವವರನ್ನು ಮುಲಾಜಿಲ್ಲದೇ ಪಕ್ಷದಿಂದ ಹೊರಹಾಕಲಾಗುವುದು.’

ಹೀಗೆಂದು ಮಾಜಿ ಪ್ರಧಾನಿ, ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. ದೇವೇಗೌಡ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ನೂತನ ಪದಾಧಿಕಾರಿಗಳು ಮತ್ತು ಶಾಸಕರ ಸಭೆಯಲ್ಲಿ ಅವರು ಮಾತನಾಡಿ, ಪಕ್ಷದ ನಾಯಕತ್ವ ಸಮರ್ಥವಾಗಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರೆ, ಅಧಿಕಾರ ರಚಿಸುವುದು ಕಷ್ಟವೇನಲ್ಲ ಎಂದು ತಿಳಿಸಿದ್ದಾರೆ.

ಪಕ್ಷದಲ್ಲಿ ಬಹುದೊಡ್ಡ ನಾಯಕರು ಇಲ್ಲ. ಆದರೆ, ಇರುವವರೇ ನಾಯಕತ್ವದ ಮೂಲಕ ಪಕ್ಷಕ್ಕೆ ಶಕ್ತಿ ತುಂಬುತ್ತಾರೆ. ಪಕ್ಷಕ್ಕಾಗಿ ದುಡಿಯುವವರಿಗೆ ಅವಕಾಶ ಇದ್ದೇ ಇರುತ್ತದೆ. ಕೆಲಸ ಮಾಡದವರನ್ನು ನಾನೇ ಹೊರ ಹಾಕುತ್ತೇನೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಬಂದಿರುವ ಸಮೀಕ್ಷೆಗಳ ಕುರಿತಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಜೆ.ಡಿ.ಎಸ್. ಅಧಿಕಾರಕ್ಕೆ ಬರಬೇಕು. ಕುಮಾರಸ್ವಾಮಿಗೆ ಇನ್ನೊಂದು ಅವಕಾಶ ನೀಡಬೇಕೆಂಬ ಅಭಿಪ್ರಾಯ ಜನರಲ್ಲಿದೆ. ಎಲ್ಲರೂ ಒಟ್ಟಾಗಿ ಶ್ರಮಿಸಿದರೆ, ಅಧಿಕಾರ ರಚಿಸುವುದು ಕಷ್ಟವೇನಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...