alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಸಭಾ ಚುನಾವಣೆ: ಜೆಡಿಎಸ್ ಗೆ ಭಾರೀ ಮುಖಭಂಗ

JDS-party-symbol 346ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಭಾರೀ ಮುಖಭಂಗವಾಗಿದ್ದು, ಕೇವಲ ಐದು ಮಂದಿ ಶಾಸಕರು ಭಿನ್ನಮತೀಯರಾಗಿ ಇದುವರೆಗೂ ಗುರುತಿಸಿಕೊಂಡಿದ್ದರ ಮಧ್ಯೆ ಇಂದಿನ ಚುನಾವಣೆಯಲ್ಲಿ ಅದಕ್ಕಿಂತ ಹೆಚ್ಚು ಮಂದಿ ಶಾಸಕರು ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎಂ. ಫಾರೂಕ್ ರ ವಿರುದ್ದ ಮತ ಚಲಾಯಿಸಿದ್ದಾರೆ ಎನ್ನಲಾಗಿದೆ.

ರಾಜ್ಯಸಭಾ ಚುನಾವಣೆಗೆ ಇಂದು ಮತದಾನ ಆರಂಭಗೊಂಡ ವೇಳೆ ಕಾಂಗ್ರೆಸ್ ಶಾಸಕರಿಗೆ ಸೂಚನೆ ನೀಡಲು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯವರೇ ಉಪಸ್ಥಿತರಿದ್ದರೆ ಜೆಡಿಎಸ್ ಪರವಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಜರಿದ್ದರು.

ಮತದಾನ ಮುಗಿದ ಬಳಿಕ ಚುನಾವಣೆಯಲ್ಲಿ ಆಡಳಿತ ಪಕ್ಷದವರು ಶಾಸಕರ ಮೇಲೆ ಪ್ರಭಾವ ಬೀರಿದ್ದಾರೆಂದು ಆರೋಪಿಸಿ ಜೆಡಿಎಸ್, ರಾಜ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ಅವರು ಈ ವಿಚಾರವನ್ನು ಕೇಂದ್ರ ಚುನಾವಣಾಧಿಕಾರಿಗಳ ಗಮನಕ್ಕೆ ತಂದಿದ್ದರು. ಹೀಗಾಗಿ ಮತ ಎಣಿಕೆ ಕಾರ್ಯ ವಿಳಂಬವಾಯಿತು. ಈ ದೂರನ್ನು ಪರಿಶೀಲಿಸಿದ ಕೇಂದ್ರ ಚುನಾವಣಾ ಆಯೋಗ ಅದನ್ನು ತಿರಸ್ಕರಿಸಿ ಮತ ಎಣಿಕೆ ಕಾರ್ಯ ಆರಂಭಿಸುವಂತೆ ಸೂಚಿಸಿದ್ದು, ಅದರಂತೆ ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಆಸ್ಕರ್ ಫರ್ನಾಂಡೀಸ್, ಜೈರಾಂ ರಮೇಶ್ ಹಾಗೂ ಮೂರನೇ ಅಭ್ಯರ್ಥಿ ಕೆ.ಸಿ. ರಾಮಮೂರ್ತಿ, ಬಿಜೆಪಿಯ ನಿರ್ಮಲಾ ಸೀತಾರಾಮನ್ ಜಯ ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಬಿ.ಎಂ. ಫಾರೂಕ್ ಪರಾಭವಗೊಂಡಿದ್ದಾರೆ. ಜೆಡಿಎಸ್ ನ ಒಟ್ಟು ಐದಕ್ಕೂ ಅಧಿಕ ಮತಗಳು ಅನ್ಯ ಪಕ್ಷದ ಪಾಲಾಗಿವೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...