alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ ಮಾಜಿ ಸಿಎಂ

ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್, ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಕರೆದಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಿದ್ದಾರೆಂದು ತಿಳಿದುಬಂದಿದೆ.

ರಾಜ್ಯದಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ಹೈಕಮಾಂಡ್ ಜೊತೆ ಚರ್ಚೆ ನಡೆಸುವ ಸಾಧ್ಯತೆಯಿದ್ದು, ಈ ಮೈತ್ರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಮುಂದುವರಿಯುತ್ತದಾ ಎಂಬುದನ್ನು ಕಾದುನೋಡಬೇಕಿದೆ.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಉತ್ಸುಕವಾಗಿದ್ದರೂ ಕೆಲ ಜಿಲ್ಲೆಗಳಲ್ಲಿ ಅಲ್ಲಿನ ನಾಯಕರು ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಎಲ್ಲ ವಿಚಾರಗಳು ಇಂದಿನ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...