alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲ ಕೆರಳಿಸಿದೆ ಹೆಚ್.ಡಿ. ದೇವೇಗೌಡರ ಮುಂದಿನ ರಾಜಕೀಯ ನಡೆ

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ರಾಜ್ಯ ರಾಜಕಾರಣದಲ್ಲಿ ಮಾತ್ರವಲ್ಲ ರಾಷ್ಟ್ರೀಯ ರಾಜಕಾರಣದಲ್ಲೂ ಮಹತ್ವದ ಪಾತ್ರ ವಹಿಸುತ್ತಾ ಬಂದಿದ್ದಾರೆ.

ಇಳಿ ವಯಸ್ಸಿನಲ್ಲೂ ಫಿಟ್ ಅಂಡ್ ಫೈನ್ ಆಗಿರುವ ದೇವೇಗೌಡರು ಅಂತರಾಷ್ಟ್ರೀಯ ಯೋಗ ದಿನಾಚರಣೆಯಂದು ಪ್ರದರ್ಶಿಸಿದ ಆಸನಗಳು ಹದಿಹರೆಯದವರನ್ನೂ ನಾಚಿಸುವಂತಿತ್ತು.

2019 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದೆ ಮೊಮ್ಮಗ ಪ್ರಜ್ವಲ್ ರೇವಣ್ಣರಿಗೆ ಅವಕಾಶ ಮಾಡಿಕೊಡಲಿದ್ದಾರೆಂದು ಹೇಳಲಾಗಿತ್ತು.

ಆದರೆ ಇದೀಗ ಹೊಸ ವಿಷಯವೊಂದು ಕೇಳಿ ಬರುತ್ತಿದ್ದು, ಸಿ.ಎಸ್. ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಿಂದ ದೇವೇಗೌಡರು ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹಾಸನ ಲೋಕಸಭಾ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣರಿಗೆ ಬಿಟ್ಟುಕೊಟ್ಟು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿಯಲು ದೇವೇಗೌಡರು ಸಜ್ಜಾಗಿದ್ದಾರೆನ್ನಲಾಗಿದೆ.

ಆದರೆ ಈಗಾಗಲೇ ಕಾಂಗ್ರೆಸ್ ನಿಂದ ಒಂದು ಹೆಜ್ಜೆ ಹೊರಗಿಟ್ಟಿರುವ ನಟ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಯಕೆ ಹೊಂದಿದ್ದು, ಯಾರಾಗಲಿದ್ದಾರೆ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂಬುದು ಈಗ ಕುತೂಹಲ ಕೆರಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...